ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಆಗಮಿಸಿದ ಮಾನ್ಯ ಅರಣ್ಯ ಮತ್ತು ಪರಿಸರ ಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವನ್ನು  ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ  ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವರಿಗೆ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು.
ಕಡಮಕಲ್ಲು-ಗಾಳಿಬೀಡು-ಮಡಿಕೇರಿ ರಸ್ತೆ ಮತ್ತು ತೋಡಿಕಾನ- ಪಟ್ಟಿ- ಭಾಗಮಂಡಲ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಬೇಕಾದ ಸಹಕಾರ ನೀಡಬೇಕು‌. ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆಯ ವರದಿಗಳನ್ನು ಶೀಘ್ರವಾಗಿ ಪ್ರಕಟಿಸಬೇಕು. ಅರಣ್ಯ ಪ್ರದೇಶದಲ್ಲಿ ವಾಸಿಸುವ ಜನರನ್ನು ಒಕ್ಕಲೆಬ್ಬಿಸದೆ ಸದರಿ ಜಾಗದಲ್ಲಿ ವಾಸಿಸುವುದಕ್ಕೆ ಅವಕಾಶ ಮಾಡಿಕೊಟ್ಟು ಹಕ್ಕುಪತ್ರವನ್ನು ಒದಗಿಸಬೇಕು. ಕೃಷಿಕರ ತೋಟಗಳಿಗೆ ಇಲಾಖೆಯ ಅನುದಾನ ಸೋಲಾರ್ ಬೇಲಿ ನಿರ್ಮಾಣಕ್ಕೆ ಪ್ರಸ್ತುತ ಒದಗಿಸುವ ಶೇಕಡ 50/50 ಅನುದಾನದ ಬದಲಿಗೆ 75/25ಅನುದಾನವನ್ನು ಒದಗಿಸಬೇಕು.
ಕೃಷಿ ತೋಟಗಳಿಗೆ ಹಾನಿಯಾದ ಪರಿಹಾರ ಮೊತ್ತವನ್ನು ಹೆಚ್ಚಿಸಿ ಅದಷ್ಟು ಬೇಗ ಬಿಡುಗಡೆಗೊಳಿಸಿ ಸಂಕಷ್ಟದಲ್ಲಿರುವ ರೈತರಿಗೆ ನೇರವಾಗುವಂತೆ ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ರಬ್ಬರ್ ಮಂಡಳಿ ನಿರ್ದೇಶಕ ಮುಳಿಯ ಕೇಶವ ಭಟ್, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಗ್ರಾ.ಪಂ. ಮಾಜಿ ಸದಸ್ಯ ರಾಕೇಶ್ ಮೆಟ್ಟಿನಡ್ಕ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading