ಕಡಬ : ಬಲ್ಯದಲ್ಲಿ ನೂತನ ಆಟೋರಿಕ್ಷಾ ನಿಲ್ದಾಣ ಉದ್ಘಾಟನೆ

ಕಡಬ ತಾಲೂಕಿನ ಬಲ್ಯ ಎಂಬಲ್ಲಿ ನೂತನವಾಗಿ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಆಟೋ ರಿಕ್ಷಾ ನಿಲ್ದಾಣವನ್ನು ಇಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಬಲ್ಯ ಬೂತ್ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಪಟ್ಟೆ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈಮನವಳಿಕೆ, ಬಿಜೆಪಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕೃಷ್ಣ ಎಮ್.ಅರ್, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಬಲ್ಯ ಇದರ ಕಾರ್ಯದರ್ಶಿಗಳಾದ ನಾರಾಯಣ ಗೌಡ ಬಲ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಟೋ ರಿಕ್ಷಾ ಚಾಲಕರಿಗೆ ಶ್ರೀ ಉಮಾ ಮಹೇಶ್ವರ ದೇವಸ್ಥಾನ ಬಲ್ಯ ಇದರ ಅಧ್ಯಕ್ಷರಾದ ರಾಮಚರಣ್ ರಾಯ್ ಬಲ್ಯ ಅವರು ಮಳೆಗಾಳದ ಕಿಟ್ ಅನ್ನು ಮಾನ್ಯ ಶಾಸಕರು ವಿತರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading