ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಸ್ವೀಕಾರದ ಅಂಗವಾಗಿ ವಿಶೇಷ ಪೂಜೆ

ಸುಬ್ರಹ್ಮಣ್ಯ ಜೂನ್ 3 : ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಪೂರ್ಣ ಅನುಗ್ರಹಕ್ಕಾಗಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಅಶೋಕ್ ನೆಕ್ರಾಜೆ, ಡಾ. ರಘು, ಲೀಲಾ ಮನಮೋಹನ್, ಪ್ರವೀಣ್ ರೈ ಮರುವಂಜ, ಸೌಮ್ಯ ಭರತ್, ಶ್ರೀ ದೇವಳದ ಕಾರ್ಯ ನಿರ್ವಹಣಾ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರುಗಳಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಶ್, ಮಾಜಿ ಅಧ್ಯಕ್ಷ ಗಣೇಶ ಕೈಕುರೆ, ಮುಖಂಡರಾದ ವೆಂಕಟರಮಣ ಗೌಡ, ಗೋಪಾಲ್ ಎಣ್ಣೆಮಜಲು, ಸುಬ್ರಹ್ಮಣ್ಯ ಭಟ್, ಭವಾನಿ ಶಂಕರ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading