ಕೆ.ಎಫ್.ಡಿ.ಸಿ ಯ ಎಲ್ಲಾ ಖಾಯಂ ನೌಕರರಿಗೆ ಇ.ಎಸ್.ಐ ಸೇವೆ ವಿಸ್ತರಣೆ – ಬೊಳ್ಳೂರು

ಸುಳ್ಯ, ಜೂ. 5: ಕೆಎಫ್‌ಡಿಸಿ ವಿಚಾರದಲ್ಲಿ ಸ್ಥಳೀಯವಾಗಿ ಹಲವು ಸಂಘಟನೆಗಳು ನಿರಂತರ ಹೋರಾಟ ನಡೆಸಿದ್ದು, ಅದರ ಫಲವಾಗಿ ಕಾರ್ಖಾನೆ ಕಾರ್ಮಿಕರಿಗೆ ಮಾತ್ರ ಸೀಮಿತವಾಗಿದ್ದ ಇಎಸ್‌ಐ (ESI) ಸೇವೆಯನ್ನು ಎಲ್ಲಾ ಖಾಯಂ ಕಾರ್ಮಿಕರಿಗೆ ವಿಸ್ತರಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದರು.

. . . . . . . . .

ಅವರು ಸುಳ್ಯದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಎಫ್‌ಡಿಸಿ ಕಾರ್ಮಿಕರ ಪರವಾಗಿ ವಿವಿಧ ಸೌಲಭ್ಯಗಳಿಗೆ ಬೇಡಿಕೆ ಸಲ್ಲಿಸಲಾಗಿದ್ದು, ಅವುಗಳಲ್ಲಿ ಹಲವು ಬೇಡಿಕೆಗಳಿಗೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಿಂದ ಅಂಗೀಕಾರ ದೊರೆತಿದೆ ಎಂದು ತಿಳಿಸಿದರು.

. . . . . . .

ಕೆಎಫ್‌ಡಿಸಿ ಕಾರ್ಮಿಕರ ವಸತಿ ಮನೆಗಳನ್ನು ಹಂತ ಹಂತವಾಗಿ ದುರಸ್ತಿ ಹಾಗೂ ಅಭಿವೃದ್ಧಿಪಡಿಸುವ ಕಾರ್ಯ ನಡೆಯುತ್ತಿದ್ದು, ನಿಗಮದ ಹಣಕಾಸಿನ ಸ್ಥಿತಿಗತಿಗಳನ್ನು ಪರಿಗಣಿಸಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಸ್ತೆ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಸೌಲಭ್ಯಗಳ ಕುರಿತಂತೆ ಈಗಾಗಲೇ ಕ್ರಮಗಳನ್ನು ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಮಂಜುನಾಥ್ ಕಂದಡ್ಕ ಕರ್ನಾಟಕ ತೋಟಗಾರಿಕ ಮತ್ತು ಕಾರ್ಖಾನೆ ಕಾರ್ಮಿಕರ ಸಂಘದ ಅಧ್ಯಕ್ಷ ಶಿವಕುಮಾರ್ ಕಂದಡ್ಕ, ಸದಸ್ಯ ಗಣೇಶ್ ನಾಗಪಟ್ಟಣ, ತೋಟ ತೊಳಿಲಾಲ್ ಸಂಘದ ಪ್ರಧಾನ ಕಾರ್ಯದರ್ಶಿ ಶರವಣನ್ ಬೇಂಗಮಲೆ, ಕಾರ್ಯದರ್ಶಿ ಚಂದ್ರನ್ ಕೂಟೇಲು, ಸಂಘದ ಸದಸ್ಯ ರಕ್ಷಿತ್ ಗೂನಡ್ಕ, ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading