ಕುಕ್ಕೆ ಸುಬ್ರಹ್ಮಣ್ಯ : ನಿವೃತ್ತ ಗ್ರಂಥಪಾಲಕರಿಗೆ ಬೀಳ್ಕೊಡುಗೆ ಸಮಾರಂಭ – “ದೇವಳದ ವಿದ್ಯಾಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವುದು ಭಾಗ್ಯ” : ಹರೀಶ್ ಇಂಜಾಡಿ

ಸುಬ್ರಹ್ಮಣ್ಯ : “ಶ್ರೀ ದೇವಳದ ವಿದ್ಯಾಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ದೊರಕಿರುವ ಅವಕಾಶವು ದೇವರ ವರವಾಗಿದೆ. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ದೇವರ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದರೆ ದೇವರ ಆಶೀರ್ವಾದ ಸದಾ ಇರುತ್ತದೆ. ವಿದ್ಯಾರ್ಥಿಗಳ ಅನುಕೂಲತೆಗೆ ಮತ್ತು ಅವರ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸೇವೆ ಸಲ್ಲಿಸುವುದರಿಂದ ಮಕ್ಕಳ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗುತ್ತದೆ. ಕರ್ತವ್ಯ ನಿಷ್ಠೆಯು ಸದಾ ಗೌರವಕ್ಕೆ ಪ್ರಾಪ್ತವಾಗುತ್ತದೆ” ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್.ಎಸ್ ಇಂಜಾಡಿ ಹೇಳಿದರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಾಬು.ಎಚ್.ಹಾಸನಡ್ಕ ಅವರಿಗೆ ಶನಿವಾರ ಶ್ರೀ ದೇವಳದ ವಲ್ಲೀಶ ಸಭಾಭವನದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸೌಮ್ಯಾ ಭರತ್, ಪ್ರವೀಣ ರೈ ಮರುವಂಜ, ಲೀಲಾಮನಮೋಹನ್, ಅಜಿತ್ ಪಾಲೇರಿ, ನಿವೃತ್ತ ಗ್ರಂಥ ಪಾಲಕರಾದ ಬಾಬು.ಎಚ್.ಹಾಸನಡ್ಕ ಮುಖ್ಯ ಅತಿಥಿಗಳಾಗಿದ್ದರು. 
ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್, ಪ್ರೌಢಶಾಲಾ ಮುಖ್ಯಗುರುಗಳಾದ ನಂದಾ ಹರೀಶ್, ಹಿರಿಯ ಸಹಶಿಕ್ಷಕರಾದ ಎಂ.ಕೃಷ್ಣ ಭಟ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ತ್ರಿವೇಣಿ ದಾಮ್ಲೆ, ಸಾಂಸ್ಕೃತಿಕ ಸಂಘದ ಸಂಚಾಲಕರಾದ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸರಕಾರದ ಸಂಚಾಲಕರಾದ ಜಯಪ್ರಕಾಶ್.ಆರ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಲೋಕೇಶ್ ಬಿ.ಎನ್, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷರಾದ ಗುಣವರ್ಧನ ಕೆದಿಲ, ಜತೆಕಾರ್ಯದರ್ಶಿ ಶಶಿಧರ ಕತ್ತಿಮಜಲು ಮತ್ತು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
ಗೌರವಾರ್ಪಣೆ : ಸಂಸ್ಥೆಯಲ್ಲಿ 26 ವರ್ಷಗಳಿಂದ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಾಬು.ಎಚ್.ಹಾಸನಡ್ಕ ಅವರಿಗೆ ಆರಂಭದಲ್ಲಿ ಆಡಳಿತ ಮಂಡಳಿ ವತಿಯಿಂದ ಅಧ್ಯಕ್ಷರಾದ ಹರೀಶ್.ಎಸ್.ಇಂಜಾಡಿ ಶ್ರೀ ದೇವರ ಬೆಳ್ಳಿಯ ಪೊಟೋ ಮತ್ತು ದೇವರ ಪ್ರಸಾದ ನೀಡಿ ಸನ್ಮಾನಿಸಿದರು. ಬಳಿಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಶಿಕ್ಷಕ ರಕ್ಷಕ ಸಂಘದ ವತಿಯಿಂದ, ವಿದ್ಯಾರ್ಥಿ ವೃಂದದ ವತಿಯಿಂದ ಗೌರವಿಸಲಾಯಿತು. ಅಂತಿಮವಾಗಿ ಸಹೋದ್ಯೋಗಿಗಳ ವತಿಯಿಂದ ಪುಷ್ಪವೃಷ್ಠಿಯ ನಡುವೆ ಶಾಲು ಹೊದಿಸಿ, ಸ್ವರ್ಣ ಲೇಪಿತ ಸರಸ್ವತಿಯ ವಿಗ್ರಹ ಹಾಗೂ ಸನ್ಮಾನಪತ್ರ ನೀಡಿ ಗೌರವಿಸಿ ಸನ್ಮಾನಿಸಲಾಯಿತು.
ಪ್ರೌಢಶಾಲಾ ಮುಖ್ಯ ಗುರುಗಳಾದ ನಂದಾ ಹರೀಶ್ ಸ್ವಾಗತಿಸಿದರು. ಹಿರಿಯ ಆಯ್ಕೆ ಶ್ರೇಣಿ ಉಪನ್ಯಾಸಕರಾದ ರೇಖಾರಾಣಿ ಸೋಮಶೇಖರ್ ಅಭಿನಂದನಾ ಭಾಷಣ ಮಾಡಿದರು. ಉಪನ್ಯಾಸಕರಾದ ಜಯಶ್ರೀ.ವಿ.ದಂಬೆಕೋಡಿ ಸನ್ಮಾನಪತ್ರ ವಾಚಿಸಿದರು. ಉಪನ್ಯಾಸಕರಾದ ಪೂರ್ಣಿಮಾ ವಂದಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಶ್ರುತಿ ಅಶ್ವತ್ಥ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ರೋರ‍್ಸ್ ಮತ್ತು ರೇಂಜರ‍್ಸ್ ವಿದ್ಯಾರ್ಥಿಗಳು ಕಾರ್ಯಕ್ರಮ ಆಯೋಜನೆ ಮಾಡಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading