ಸುಳ್ಯ ಕಸಾಪ ವತಿಯಿಂದ ಎಸ್.ಎಸ್.ಎಲ್.ಸಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ – “ಸನ್ಮಾನದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ” : ಡಾ.ಕೆ.ವಿ‌ ಚಿದಾನಂದ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇದರ ಆಶ್ರಯದಲ್ಲಿ 2025-26ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಜೂ.06 ರಂದು ಅಪರಾಹ್ನ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದರು ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಿ ಮಾತನಾಡಿ “ಪ್ರತೀ ವರುಷವು ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕ.ಸಾ.ಪ ವತಿಯಿಂದ ಅಭಿನಂದಿಸುವ ಕಾರ್ಯ ಶ್ಲಾಘನೀಯ. ಇಂತಹ ಸನ್ಮಾನಗಳು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತದೆ. ಇದನ್ನು ಕಸಾಪ ಮುಂದುವರಿಸಿಕೊಂಡು ಹೋಗಬೇಕು. ಕನ್ನಡದ ಬೆಳವಣಿಗೆಗೆ ಮಕ್ಕಳ ಪಾತ್ರ ಮಹತ್ವದಾಗಿದೆ” ಎಂದು ಅವರು ಹೇಳಿದರು. 
ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸ್ವರ್ಣಕಲಾ ಎ‌.ಎಸ್, ಕ್ಷೇತ್ರ ಶಿಕ್ಷಣ ಸಂಯೋಜಕ ನಾರಾಯಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕಿಗೆ ಪ್ರಥಮ, ದ್ವಿತೀಯ ಬಂದ ವಿದ್ಯಾರ್ಥಿಗಳನ್ನು, ಕನ್ನಡ ಭಾಷಾ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು, ಕನ್ನಡ ಭಾಷಾ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸರಕಾರಿ ಶಾಲೆಗಳಲ್ಲಿ ಕನ್ನಡದಲ್ಲಿ ಶೇಕಡಾ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶ್ರೀಮತಿ ಚಂದ್ರಮತಿ.ಕೆ, ನಿವೃತ್ತ ಪ್ರೌಢಶಾಲಾ ಶಿಕ್ಷಕಿಯವರ ಮಾತೃಶ್ರೀ ಕೊಡಪಾಲ ಯಶೋದಾ ಚಿನ್ನಪ್ಪ ಗೌಡ ಸ್ಮರಣಾರ್ಥ ನೀಡುವ ದತ್ತಿನಿಧಿ ಪುರಸ್ಕಾರವನ್ನು ನೀಡಲಾಯಿತು.
ವೇದಿಕೆಯಲ್ಲಿ ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಕಸಾಪ ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ, ಶ್ರೀಮತಿ ಚಂದ್ರಮತಿ.ಕೆ, ಗೌ.ಕೋಶಾಧಿಕಾರಿ ದಯಾನಂದ ಆಳ್ವ ಉಪಸ್ಥಿತರಿದ್ದರು. ಕನ್ನಡ ಭಾಷಾ ವಿಷಯದಲ್ಲಿ 
ಶೇ.100 ಅಂಕ ಪಡೆದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಮುಖ್ಯಸ್ಥರು, ಕನ್ನಡಾಭಿಮಾನಿಗಳು, ಕಸಾಪ ಸದಸ್ಯರು ಉಪಸ್ಥಿತರಿದ್ದರು. 
ಕಾರ್ಯಕ್ರಮದಲ್ಲಿ ತೇಜಸ್ವಿ ಕಡಪಳ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಸಾಪ ಸದಸ್ಯರುಗಳಾದ ಲತಾಶ್ರೀ ಸುಪ್ರೀತ್ ಮೋಂಟಡ್ಕ ಸನ್ಮಾನಿತರ ಪಟ್ಟಿ ವಾಚಿಸಿದರು. ರಮೇಶ್ ನೀರಬಿದಿರೆ ವಂದಿಸಿದರು. ಶ್ರೀಮತಿ ಚಂದ್ರಮತಿ ಕೆ. ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading