ಗುತ್ತಿಗಾರು : ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಸುಬ್ರಹ್ಮಣ್ಯ ಉಪವಿಭಾಗದ ಪಂಜ ಅರಣ್ಯ ವಲಯದ ವತಿಯಿಂದ ಜೂ.05ರಂದು ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಳ್ಪ, ಗುತ್ತಿಗಾರು ಹಾಗೂ ಏನೆಕಲ್ಲು ವಲಯದ ಉಪ ವಲಯಾರಣ್ಯಾಧಿಕಾರಿಗಳಾದ ಮೊಹಮ್ಮದ್ ಮೆಹಬೂಬ್ ರವರು ಸಸಿಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು, ಹಾಗೂ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸಿದರು.
ಈ ಸಂದರ್ಭದಲ್ಲಿ ಗಸ್ತು ಅರಣ್ಯ ಪಾಲಕರಾದ ಧರಣಪ್ಪ.ಕೆ.ಎ, ಧನಂಜಯ.ಕೆ, ಭರಮಪ್ಪ, ಅರಣ್ಯ ವೀಕ್ಷಕರಾದ ಗಣೇಶ್ ಹೆಗ್ಡೆ, ಚರಣ್, ಗಣೇಶ್, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಲಿಜೋ ಜೋಸ್, ಶಾಲಾ ಸಂಚಾಲಕರಾದ ಸಿಸ್ಟರ್ ಸಿಲ್ವಿಯಾ, ಶಾಲಾ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಟ್ರೇಸಾ ಜಾನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಶ್ರೀಮತಿ ಬುಷ್ರಾ ಸ್ವಾಗತಿಸಿ, ಕು. ಅರ್ಪಿತಾ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಗೀತಾ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading