70 ವರ್ಷಗಳಿಂದ ರಸ್ತೆ ಅಭಿವೃದ್ಧಿಯಾಗಿಲ್ಲ : ಮತದಾನ ಬಹಿಷ್ಕಾರಕ್ಕೆ ನೆಲ್ಲಿಬಂಗಾರಡ್ಕ ನಿವಾಸಿಗಳ ನಿರ್ಧಾರ

ಸುಳ್ಯ: ಸುಳ್ಯ ನಗರದಿಂದ ಕೇರ್ಪಳವಾಗಿ ನೆಲ್ಲಿಬಂಗಾರಡ್ಕಕ್ಕೆ ಹೋಗುವ ರಸ್ತೆ 70 ವರ್ಷ ಕಳೆದರೂ ಡಾಮರೀಕರಣ ಅಥವಾ ಕಾಂಕ್ರಿಟೀಕರಣವಾಗದೇ ಇರುವುದಕ್ಕೆ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಸ್ತೆಯ ದುಸ್ಥಿತಿಯಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದು, ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನೆಲ್ಲಬಂಗಾರಡ್ಕ ಭಾಗದ ಮತದಾರರು ಇನ್ನು ಮುಂದೆ ನಡೆಯುವ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ರಸ್ತೆ ಅಭಿವೃದ್ಧಿಗೆ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ತಮ್ಮ ನಿರ್ಧಾರವನ್ನು ಮುಂದುವರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಈ ಸಮಸ್ಯೆಗೆ ಶೀಘ್ರ ಸ್ಪಂದಿಸಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕೆಂದು ಊರ ನಾಗರಿಕರು ಆಗ್ರಹಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading