ಜೂ.13 ರಂದು ಜೇಸಿಐ ಸುಳ್ಯ ಸಿಟಿ & ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಜೇಸಿಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು, ಜಂ ಇಯ್ಯತುಲ್ ಫಲಾಹ್ (ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಲಯನ್ಸ್ ಕ್ಲಬ್ ಹಿರಿಯಡ್ಕ ಇವರ ಸಹಯೋಗದಲ್ಲಿ ಜೂ.13 ರಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
“ನಿಮ್ಮ ರಕ್ತದ ಒಂದು ಹನಿ, ಯಾರೋ ಒಬ್ಬರ ಬದುಕಿನ ಹೊಸ ಪ್ರಾರಂಭ” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯಲಿರುವ ಈ ಶಿಬಿರವು ಜೂನ್ 13, 2026ರಂದು ಶನಿವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಸುಳ್ಯದ ಅಂಬಟೆಡ್ಕದಲ್ಲಿರುವ ವರ್ತಕ ಸಮುದಾಯ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಸಭಾಪತಿಗಳಾದ ಪಿ. ಬಿ. ಸುಧಾಕರ ರೈ ಉದ್ಘಾಟಿಸಲಿದ್ದು, ಜೇಸಿಐ ಸುಳ್ಯ ಸಿಟಿಯ ಅಧ್ಯಕ್ಷೆ ಜೆಎಫ್‌ಎಂ ನಾಗವೇಣಿ ದಾಮೋದರ ಕೋರಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷರು, ಅಬ್ದುಲ್ ಹಮೀದ್ ಜನತಾ, ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂತೋಷ್, ಲಯನ್ಸ್ ಕ್ಲಬ್ ಹಿರಿಯಡ್ಕ ಅಧ್ಯಕ್ಷ ರಘುವೀರ್ ಶೆಟ್ಟಿಗಾರ್, ಪ್ರೆಸ್ ಕ್ಲಬ್ ಸುಳ್ಯ ತಾಲೂಕು ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಜಂ ಇಯ್ಯತುಲ್ ಫಲಾಹ್ (ರಿ.) ಸುಳ್ಯ ಘಟಕದ ಅಧ್ಯಕ್ಷ ಹಾಗೂ ವಕೀಲ ಮೂಸ ಕುಂಞ ಪಿ.ಎಂ. ಹಾಗೂ ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಆಯೋಜಕರು ಸಾರ್ವಜನಿಕರು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅಮೂಲ್ಯ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಮಹತ್ಕಾರ್ಯಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9481022315, 9448012141, 9901109883, 8147453575, 9482812979 ಇವರನ್ನು ಸಂಪರ್ಕಿಸಬಹುದು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading