ಸುಳ್ಯ : ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಜೆ.ಸಿ.ಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಘಟಕ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು, ಜಂ ಇಯ್ಯತುಲ್ ಫಲಾಹ್(ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದ.ಕ ಜಿಲ್ಲೆ, ಲಯನ್ಸ್ ಕ್ಲಬ್ ಹಿರಿಯಡ್ಕ, ಡಿಸ್ಟಿಕ್ 317ಸಿ, ರಿಜಿನ್ VI, ಜೋನ್ III ಇವರ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಜೂ.13 ರಂದು ಸುಳ್ಯ ವರ್ತಕರ ಸಂಘದ ಸಭಾಂಗಣದಲ್ಲಿ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ಘಟಕದ ಸಭಾಪತಿಗಳಾದ ಪಿ.ಬಿ ಸುಧಾಕರ್ ರೈ ಕಾರ್ಯಕ್ರಮ ಉದ್ಘಾಟಿಸಿದರು.
ಜೆಸಿಐ ಸುಳ್ಯ ಸಿಟಿ ಅಧ್ಯಕ್ಷರಾದ ಜೆ.ಎಫ್‌.ಎಂ ನಾಗವೇಣಿ ದಾಮೋದರ ಕೋರಡ್ಕ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷರಾದ ಅಬ್ದುಲ್‌ ಹಮೀದ್‌ ಜನತಾ, ಹಿರಿಯಡ್ಕ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ| ರಘುವೀ‌ರ್ ಶೆಟ್ಟಿಗಾ‌ರ್, ಸುಳ್ಯ ತಾಲೂಕು ಪ್ರೆಸ್ ಕ್ಲಬ್‌ ಅಧ್ಯಕ್ಷರಾದ ಶರೀಫ್‌ ಜಟ್ಟಿಪಳ್ಳ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಅಧ್ಯಕ್ಷರಾದ ಯಶ್ವಿತ್ ಕಾಳಮ್ಮನೆ, ಜಂ ಇಯ್ಯತ್ತುಲ್ ಫಲಾಹ್(ರಿ.) ಸುಳ್ಯ ಘಟಕದ ಅಧ್ಯಕ್ಷರಾದ ಮೂಸ ಕುಂಞ.ಪಿ.ಎಂ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಲ| ರಮೇಶ್ ಶೆಟ್ಟಿ, ಸುಳ್ಯ ಅಗ್ನಿಶಾಮಕ ಠಾಣಾಧಿಕಾರಿ ಕಿರಣ್ ಕುಮಾರ್ ಮುಂತಾದವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ನಡೆದ ಈ ಶಿಬಿರದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ರಕ್ತದಾನಿಗಳು ಭಾಗವಹಿಸಿ ರಕ್ತದಾನವನ್ನು ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು. ಜೇ.ಸಿ.ಐ ಸುಳ್ಯ ಸಿಟಿ ಅಧ್ಯಕ್ಷೆ ಶ್ರೀಮತಿ ನಾಗವೇಣಿ ದಾಮೋದರ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀಮತಿ ತೇಜಸ್ವಿ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading