ಸುಳ್ಯ: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಜೆಸಿಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಘಟಕ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ, ಜಂ ಇಯ್ಯತುಲ್ ಫಲಾಹ್ (ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದಕ್ಷಿಣ ಕನ್ನಡ ಜಿಲ್ಲೆ, ಲಯನ್ಸ್ ಕ್ಲಬ್ ಹಿರಿಯಡ್ಕ (ಡಿಸ್ಟ್ರಿಕ್ಟ್ 317ಸಿ, ರೀಜನ್ VI, ಜೋನ್ III) ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಸುಳ್ಯ ವರ್ತಕರ ಸಂಘದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ತಾಲೂಕು ಘಟಕದ ಸಭಾಪತಿ ಪಿ.ಬಿ. ಸುಧಾಕರ್ ರೈ, ಜೆಸಿಐ ಸುಳ್ಯ ಸಿಟಿ ಅಧ್ಯಕ್ಷೆ ಜೆ.ಎಫ್.ಎಂ. ನಾಗವೇಣಿ ದಾಮೋದರ ಕೋರಡ್ಕ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಜನತಾ, ಹಿರಿಯಡ್ಕ ಲಯನ್ಸ್ ಕ್ಲಬ್ ಅಧ್ಯಕ್ಷ ರಘುವೀರ್ ಶೆಟ್ಟಿಗಾರ್, ಸುಳ್ಯ ತಾಲೂಕು ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಜಂ ಇಯ್ಯತುಲ್ ಫಲಾಹ್ (ರಿ.) ಸುಳ್ಯ ಘಟಕದ ಅಧ್ಯಕ್ಷ ಮೂಸ ಕುಂಞ ಪಿ.ಎಂ., ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ಹಾಗೂ ಸುಳ್ಯ ಅಗ್ನಿಶಾಮಕ ಠಾಣಾಧಿಕಾರಿ ಕಿರಣ್ ಕುಮಾರ್ ಉಪಸ್ಥಿತರಿದ್ದರು.
ಶಿಬಿರದಲ್ಲಿ 50ಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಿತ ರಕ್ತದಾನ ಮಾಡಿ ಮಾನವೀಯ ಸೇವೆಗೆ ಕೈಜೋಡಿಸಿದರು.
ಜೆಸಿಐ ಸುಳ್ಯ ಸಿಟಿ ಅಧ್ಯಕ್ಷೆ ನಾಗವೇಣಿ ದಾಮೋದರ ಕೋರಡ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ನಿರೂಪಿಸಿದರು. ಸಂಘಟನೆಯ ಪ್ರಧಾನ ಕಾರ್ಯದರ್ಶಿ ತೇಜಸ್ವಿ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading