ವಿಶ್ವ ರಕ್ತದಾನಿಗಳ ದಿನ: ಕೆವಿಜಿಯಲ್ಲಿ ರಕ್ತದಾನ ಶಿಬಿರಕ್ಕೆ ಉತ್ತಮ ಸ್ಪಂದನೆ

ಸುಳ್ಯ, ಜೂ.15: ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಕೆವಿಜಿ ನರ್ಸಿಂಗ್ ಇನ್ಸ್ಟಿಟ್ಯೂಟ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಹಾಗೂ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಸಹಯೋಗದಲ್ಲಿ ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಬೆಳ್ಳಿಹಬ್ಬ ಆಚರಣೆಯ ಅಂಗವಾಗಿ, ಸಂಸ್ಥೆಯ ಪೆಥಾಲಜಿ ವಿಭಾಗ ಹಾಗೂ ರಕ್ತನಿಧಿ ಕೇಂದ್ರದ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.
ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪೆಥಾಲಜಿ ವಿಭಾಗದ ಪ್ರಾಧ್ಯಾಪಕಿ ಹಾಗೂ ರಕ್ತನಿಧಿ ಕೇಂದ್ರದ ಅಧಿಕಾರಿಯಾದ ಡಾ. ನವ್ಯ ಅವರು ರಕ್ತದಾನ ಪ್ರತಿಜ್ಞಾವಿಧಿ ಬೋಧಿಸಿ, ಸ್ವಯಂಪ್ರೇರಿತ ರಕ್ತದಾನದ ಮಹತ್ವ ಹಾಗೂ ಸಮಾಜಸೇವೆಯ ಬದ್ಧತೆಯ ಕುರಿತು ಅರಿವು ಮೂಡಿಸಿದರು.
ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನಿಗಳ ಅಮೂಲ್ಯ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಜಾಗೃತಿ ಹಾಗೂ ಕೃತಜ್ಞತಾ ವೀಡಿಯೊವನ್ನು ಬಿಡುಗಡೆ ಮಾಡಲಾಯಿತು. ಜೊತೆಗೆ, ಈ ಹಿಂದೆ ರಕ್ತದಾನ ಮಾಡಿದ್ದ ದಾನಿಗಳಿಗೆ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಕೃತಜ್ಞತಾ ಪತ್ರಗಳನ್ನು ವಿತರಿಸಲಾಯಿತು.
“ಮಾನವೀಯತೆಯ ಒಂದು ಹನಿ – ರಕ್ತದಾನ ಮಾಡಿ, ಜೀವ ಉಳಿಸಿ” ಎಂಬ ಧ್ಯೇಯವಾಕ್ಯದಡಿ ನಡೆದ ಕಾರ್ಯಕ್ರಮವು ಸ್ವಯಂಪ್ರೇರಿತ ರಕ್ತದಾನದ ಅಗತ್ಯತೆ ಹಾಗೂ ರೋಗಿಗಳಿಗೆ ಸುರಕ್ಷಿತ ರಕ್ತ ಲಭ್ಯವಾಗುವ ಮಹತ್ವವನ್ನು ಒತ್ತಿಹೇಳಿತು.
ಕಾರ್ಯಕ್ರಮದಲ್ಲಿ ವಿವಿಧ ಸಹ ಸಂಸ್ಥೆಗಳ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವೈದ್ಯಕೀಯ, ನರ್ಸಿಂಗ್, ಫಿಸಿಯೋಥೆರಪಿ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ವಿಭಾಗಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಸಮಾಜದ ಹಿತಕ್ಕಾಗಿ ಅನೇಕ ದಾನಿಗಳು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಉತ್ತಮ ಸ್ಪಂದನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ. ಸತ್ಯವತಿ ಆರ್. ಆಳ್ವ ಸ್ವಾಗತಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading