ಸುಳ್ಯ : ಭಾಜಪಾ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ಸಭೆ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ಸಭೆಯು ಜೂ.17 ರಂದು ನಡೆಯಿತು. ಬಳಿಕ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ಕೋಶಾಧಿಕಾರಿಯಾದ ಪೂರ್ಣಿಮಾ ಸುಂತೋಡು ಅವರ ಪತಿ ಅಪ್ಪಯ್ಯ ಪಾಟಾಳಿಯವರು ಇತ್ತೀಚಿಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದ ಹಿನ್ನೆಲೆ ಅವರ ಮನೆಗೆ ತೆರಳಿದ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಮಂಡಲ ಸಮಿತಿ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾ ಮಂಡಲದ ವತಿಯಿಂದ ಅವರಿಗೆ ಸಾಂತ್ವನ ಹೇಳಲಾಯಿತು.

. . . . . . . . .

ಈ ಸಂದರ್ಭದಲ್ಲಿ ಸುಳ್ಯ ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೇದಪ್ಪ, ಅಧ್ಯಕ್ಷರಾದ ಮಹೇಶ್ ಜೋಗಿ, ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ, ಶಶಿಧರ ಕಲ್ಮಂಜ, ಉಪಾಧ್ಯಕ್ಷರಾದ ರಾಘವೇಂದ್ರರಾವ್, ವಿನೋದ್ ಬೆಳ್ಳಯಾರು, ಕಾರ್ಯದರ್ಶಿ ಚಂದ್ರಶೇಖರ ಪನ್ನೆ, ಮಂಡಲ ಒಬಿಸಿ ಅಧ್ಯಕ್ಷರಾದ ಗಿರೀಶ್, ಅಶೋಕ್, ಸದಾನಂದ, ಭಾರತಿ, ಅನಿತಾ, ಚಂದ್ರಾವತಿ ಆಚಾರ್ಯ ಮತ್ತು ಪದಾಧಿಕಾರಿಗಳು ಮಹಾಶಕ್ತಿ ಕೇಂದ್ರದ ಪ್ರಮುಖರು, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅವರ ಮನೆಯಲ್ಲಿ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮವು ನಡೆಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading