ಐವರ್ನಾಡು: ಬ್ಲಾಕ್ ಕಾಂಗ್ರೆಸ್ ವತಿಯಿಂದ ಎಸ್ಐಆರ್ ಬಗ್ಗೆ ಬಿಎಲ್ಎ -2 ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ಶಿಬಿರ

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಮತದಾರರ ಸಮಗ್ರ ಪರಿಷ್ಕರಣೆ (SIR) ಬಗ್ಗೆ ಕಾಂಗ್ರೆಸ್ ಪಕ್ಷದ ಬಿಎಲ್ಎ -2 ಹಾಗೂ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ತರಬೇತಿ ಶಿಬಿರ ಇಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಭವಾನಿಶಂಕರ್ ಕಲ್ಮಡ್ಕ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪವನ್ ಮುಂಡ್ರಾಜೆ, ಬ್ಲಾಕ್ ಕಾರ್ಯದರ್ಶಿ ಮತ್ತು ಐವರ್ನಾಡು ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಮಡ್ತಿಲ, ಅಮರ ಮುಡ್ನೂರು ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಹೂವಪ್ಪ ಗೌಡ ಅರ್ನೋಜಿ ವೇದಿಕೆಯಲ್ಲಿದ್ದರು. ತರಬೇತುದಾರರಾಗಿ ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ.ಜೆ. ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಭಾಗವಹಿಸಿ ತರಬೇತಿ ನೀಡಿದರು.
ಐವರ್ನಾಡು, ಅಮರಮುಡ್ನೂರು ಅಮರಪಡ್ನೂರು ಗ್ರಾಮದ ಬಿಎಲ್ಎ -2 ಗಳು, ನಾಮನಿರ್ದೇಶಿತ ಸದಸ್ಯರು, ಬ್ಲಾಕ್ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading