ಗುತ್ತಿಗಾರು : ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ಶಿಬಿರ

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಮತದಾರರ ಸಮಗ್ರ ಪರಿಷ್ಕರಣೆ(SIR) ಬಗ್ಗೆ ಗುತ್ತಿಗಾರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಡಪ್ಪಾಡಿ ತಾಲೂಕು ಪಂಚಾಯತ್ ಮತ್ತು ಗುತ್ತಿಗಾರು ತಾಲೂಕು ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಬಿ.ಎಲ್.ಎ-2 ಹಾಗೂ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ತರಬೇತಿ ಶಿಬಿರ ಜೂ.16 ರಂದು ನಾಲ್ಕೂರು ವೆಂಕಟೇಶ್ವರ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. 

. . . . . . . . .

ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ. ಜಯರಾಮ, ವಿಧಾನ ಸಭಾ ಕ್ಷೇತ್ರದ ದಿನೇಶ್ ಅಂಬೆಕಲ್ಲು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಭವಾನಿಶಂಕರ್ ಕಲ್ಮಡ್ಕ ವೇದಿಕೆಯಲ್ಲಿದ್ದರು. 

. . . . . . .

ತರಬೇತುದಾರರಾಗಿ ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ.ಜೆ. ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಭಾಗವಹಿಸಿ ತರಬೇತಿ ನೀಡಿದರು.

ಅಜ್ಜಾವರ ಮತ್ತು ಮಂಡೆಕೋಲು ಗ್ರಾಮದ ಬಿ.ಎಲ್.ಎ-2 ಗಳು, ನಾಮನಿರ್ದೇಶಿತ ಸದಸ್ಯರು, ಬ್ಲಾಕ್ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading