ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ: ಸಮಾಜಸೇವೆಯಲ್ಲಿ ಸದಸ್ಯರ ಕೊಡುಗೆ ಶ್ಲಾಘನೀಯ – ಮಾಧವ ಗೌಡ

ಸುಳ್ಯ, ಜೂ. 6: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ವಲಯ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವವು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

. . . . . . . . .

ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಯೋಜನಾಧಿಕಾರಿ ಮಾಧವ ಗೌಡ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು. ಯಾವುದೇ ಸರ್ಕಾರಗಳು ಮಾಡದಂತಹ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಪೂಜ್ಯರು ನಡೆಸುತ್ತಿದ್ದಾರೆ ಎಂದು ತಿಳಿಸಿದ ಅವರು, ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಸದಸ್ಯರಿಗೆ ಸಂಕ್ಷಿಪ್ತ ಮಾಹಿತಿ ನೀಡಿದರು.

. . . . . . .

ಕಾರ್ಯಕ್ರಮದಲ್ಲಿ ಘಟಕದ ಪ್ರತಿನಿಧಿ ಪಿ.ಜಿ. ಜಯರಾಮ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸುಳ್ಯ ವಲಯದ ಅಧ್ಯಕ್ಷೆ ಸವಿತಾ ಸಂದೇಶ, ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಸತೀಶ್ ಟಿ.ಎನ್., ಸುಳ್ಯ ವಲಯದ ಮೇಲ್ವಿಚಾರಕ ದಿನೇಶ್ ಡಿ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ನಿರ್ಮಾಣಗೊಂಡ ಮನೆಯ ಗೃಹಪ್ರವೇಶ ಹಾಗೂ ಹಸ್ತಾಂತರ ಕಾರ್ಯಕ್ರಮವು ಜೂನ್ 24ರಂದು ನಡೆಯಲಿರುವ ಕುರಿತು ಚರ್ಚಿಸಲಾಯಿತು.

ಘಟಕದ ಸುರೇಶ್ ಸ್ವಾಗತಿಸಿದರು. ರತೀಶ್ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಘಟಕದ 17 ಸದಸ್ಯರು ಭಾಗವಹಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading