ಸುಬ್ರಹ್ಮಣ್ಯದ ಎಸ್‌.ಎಸ್‌.ಪಿ.ಯು ಕಾಲೇಜಿನಲ್ಲಿ ಏಕಕಾಲದಲ್ಲಿ 1008 ವಿದ್ಯಾರ್ಥಿಗಳಿಂದ ಯೋಗಾಸನ ; “ಚಿತ್ತ ಚಾಂಚಲ್ಯ ಹೋಗಲಾಡಿಸಲು ಯೋಗ ಅಡಿಗಲ್ಲು” : ಸೋಮಶೇಖರ ನಾಯಕ್ ಅಭಿಮತ

ಸುಬ್ರಹ್ಮಣ್ಯ : “ಚಿತ್ತ ಚಾಂಚಲ್ಯವನ್ನು ಹೋಗಲಾಡಿಸಲು ಯೋಗ ಪ್ರಧಾನ. ಪ್ರಾಚೀನ ಖುಷಿ ಮುನಿಗಳಿಂದ ಸಂಜಾತ ಯೋಗವು ಸರ್ವರೋಗ ನಿವಾರಕವಾಗಿದೆ. ಪತಂಜಲಿ ಮುನಿಯಿಂದ ಭಾರತದಲ್ಲಿ ಆರಂಭವಾದ ಯೋಗ ಇಂದು ವಿಶ್ವವ್ಯಾಪಿಯಾಗಿದೆ. ಯೋಗವು ಭಾರತವು ವಿಶ್ವಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ. ಸಮಚಿತ್ತ ಮತ್ತು ದೈಹಿಕ ಸಮತೋಲನಕ್ಕೆ ಯೋಗ ಅಸ್ತçವಾಗಿದೆ. ಏಕಾಗ್ರತೆಯೊಂದಿಗೆ ಮಾನಸಿಕ ಸದೃಢತೆ ಸಾಧಿಸಲು ಯೋಗ ಅಡಿಗಲ್ಲು. ಯೋಗದಿಂದ ರೋಗವಿಲ್ಲ. ಆದುದರಿಂದ ಎಳವೆಯಲ್ಲಿಯೇ ಪ್ರತಿದಿನ ಯೋಗಾಭ್ಯಾಸ ಮಾಡಬೇಕು” ಎಂದು ಎಸ್.ಎಸ್‌.ಪಿ.ಯು ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ ನಾಯಕ್ ಹೇಳಿದರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌.ಎಸ್‌.ಪಿ.ಯು ಕಾಲೇಜಿನಲಿ ವಿಶ್ವಯೋಗ ದಿನಾಚರಣೆಯ ಅಂಗವಾಗಿ ಸೋಮವಾರ ನಡೆದ ಸಾಮೂಹಿಕ ಯೋಗಾಸನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

. . . . . . . . .

1008 ವಿದ್ಯಾರ್ಥಿಗಳಿಂದ ಯೋಗ : ಕಾಲೇಜಿನ ಮೇಲ್ಬಾಗದ ಕ್ರೀಡಾಂಗಣ ಮತ್ತು ಕೆಳಭಾಗದ ಕ್ರೀಡಾಂಗಣದಲ್ಲಿ ಪಿಯುಸಿ ಮತ್ತು ಹೈಸ್ಕೂಲ್ ಸೇರಿ ಒಟ್ಟು 1008 ವಿದ್ಯಾರ್ಥಿಗಳು ಏಕಕಾಲದಲ್ಲಿ ಯೋಗಾಸನ ಮಾಡಿದರು. ಯೋಗ ಗುರುಗಳಾದ ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್, ಉಪನ್ಯಾಸಕರಾದ ಸೌಮ್ಯಾ ದಿನೇಶ್ ಯೋಗಾಭ್ಯಾಸ ಮಾಡಿಸಿದರು.

. . . . . . .

ಪತಂಜಲಿ ಸ್ಮರಣಮಂತ್ರ : ಆರಂಭದಲ್ಲಿ ಯೋಗ ಮಂತ್ರ, ಪತಂಜಲಿ ಸ್ಮರಣಾ ಮಂತ್ರ ಪಠಿಸಲಾಯಿತು. ಬಳಿಕ ವೃಕ್ಷಾಸನ, ಪದ್ಮಾಸನ, ಮಂತ್ರ ಸಹಿತ ಸೂರ್ಯ ನಮಸ್ಕಾರ, ಭುಜಂಗಾಸನ, ಸರ್ವಾಂಗಾಸನ ಸೇರಿದಂತೆ ವಿವಿಧ ಆಸನಗಳನ್ನು ಸುಮಾರು 1:00 ಗಂಟೆಗಳ ಕಾಲ ವಿದ್ಯಾರ್ಥಿಗಳು ಮಾಡಿದರು. ಕೊನೆಯಲ್ಲಿ ರೋರ‍್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಯೋಗ ನೃತ್ಯ ಪ್ರದರ್ಶಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading