ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕರಾದ ಎ.ಸಿ. ವಸಂತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, “ವಿದ್ಯಾರ್ಥಿಗಳು ಯೋಗವನ್ನು ತಮ್ಮ ಜೀವನದ ಭಾಗವಾಗಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು” ಎಂದು ಶುಭ ಹಾರೈಸಿದರು. ಸಂಸ್ಥೆಯ ಭೌತಶಾಸ್ತ್ರ ಉಪನ್ಯಾಸಕರು ಹಾಗೂ ಯೋಗಪಟುವಾದ ಸುರೇಶ್ ವಾಗ್ಲೆ ಅವರ ನೇತೃತ್ವದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಯಿತು. ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳ ಮಹತ್ವವನ್ನು ಅವರು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

. . . . . . . . .

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀ ಸೋಮಶೇಖರ್ ಶುಭ ಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಮೋಹನ್ ಚಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

. . . . . . .

ಕಾರ್ಯಕ್ರಮದಲ್ಲಿ ಸಂಸ್ಥೆಯ 500ಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading