ಬೆಳ್ಳಾರೆ: ಬೇಟಿ ಬಚಾವೋ ಬೇಟಿ ಪಡಾವೋ ಅರಿವು ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ,ಮಹಿಳಾ ಸಬಲೀಕರಣ ಘಟಕ ಮಂಗಳೂರು ಮತ್ತು ಗ್ರಾಮ ಪಂಚಾಯತ್ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಅರಿವು ಕಾರ್ಯಕ್ರಮವನ್ನು ಜೂ. 19 ರಂದು ಬೆಳ್ಳಾರೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿಯ ಅಧ್ಯಕ್ಷೆ ದೇವಕಿ ಇವರ ಸಭಾಧ್ಯಕ್ಷತೆಯಲ್ಲಿ ನಡೆಸಲಾಯಿತು.

. . . . . . . . .

ಬೆಳ್ಳಾರೆ ಗ್ರಾಮ ಪಂಚಾಯತ್ ನ ಲೆಕ್ಕ ಸಹಾಯಕಿ ಸುಶೀಲ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಬೆಳ್ಳಾರೆ ವಲಯದ ಮೇಲ್ವಿಚಾರಕಿ ಉಷಾ ಪ್ರಸಾದ್ ರೈ ಇವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತವಿಕ ಮಾತುಗಳನ್ನಾಡಿದರು.
ಬೆಳ್ಳಾರೆ ಆರಕ್ಷಕ ಠಾಣಾ ಸಿಬ್ಬಂದಿ ಪೊಲೀಸ್ ಕಾನ್ಸ್ಟೇಬಲ್ ಪೂಜಾ ಇವರು ಬಾಲ್ಯವಿವಾಹ ಮತ್ತು ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ನೀಡಿದರು.
ಗರ್ಭಧಾರಣೆಯ ಪೂರ್ವ ಹಾಗೂ ಪ್ರಸವ ಪೂರ್ವ ರೋಗ ನಿರ್ಣಯ ತಂತ್ರಗಳ ಕಾಯ್ದೆ ಮಹತ್ವ ಮತ್ತು ಋತುಚಕ್ರ ನೈರ್ಮಲ್ಯತೆ ಯ ಬಗ್ಗೆ ಬೆಳ್ಳಾರೆ ಗ್ರಾಮ ಆರೋಗ್ಯಧಿಕಾರಿ ಹವ್ಯಶ್ರೀ ಮಾಹಿತಿ ನೀಡಿದರು.
ದರ್ಖಾಸ್ತು ಅಂಗನವಾಡಿ ಕಾರ್ಯಕರ್ತೆ ಅಶ್ವಿನಿ ಸ್ವಾಗತಿಸಿ, ಮಾಸ್ತಿಕಟ್ಟೆ ಅಂಗನವಾಡಿ ಕಾರ್ಯಕರ್ತೆ ಇಂದಿರಾ ಕೆ. ವಂದಿಸಿ, ಬೆಳ್ಳಾರೆ ಅಂಗನವಾಡಿ ಕಾರ್ಯಕರ್ತೆ ಭಾರತಿ ಕೆ. ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಗೊಂಚಲು ಸಮಿತಿಯ ಸದಸ್ಯರು, ಆಶಾ ಕಾರ್ಯಕರ್ತೆಯರು ಕೃಷಿ ಸಖಿ, ಪಶು ಸಖಿ ಮತ್ತು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading