ಗುತ್ತಿಗಾರಿನಲ್ಲಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಕಾರ್ಯಕ್ರಮ

ಗುತ್ತಿಗಾರು : ಜೇಸಿಐ ಪಂಜ ಪಂಚಶ್ರೀ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ, ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಸಹಯೋಗದೊಂದಿಗೆ ಶಾಲಾ ವಿದ್ಯಾರ್ಥಿಗಳಿಗಾಗಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಕಾರ್ಯಕ್ರಮವು ಗುರುವಾರ ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷರಾದ ಜೆಎಫ್‌ಎಂ ದೇವಿಪ್ರಸಾದ್ ಚಿಕ್ಕುಳಿ ವಹಿಸಿದ್ದರು. ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ದುಷ್ಪರಿಣಾಮಗಳು, ವ್ಯಸನದಿಂದ ಉಂಟಾಗುವ ಸಾಮಾಜಿಕ ಹಾಗೂ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ಯುವಜನತೆ ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.

. . . . . . . . .

ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ., ವರ್ತಕರ ಸಂಘದ ಅಧ್ಯಕ್ಷ ವಿನ್ಯಾಸ್ ಕೊಚ್ಚಿ, ಕಾರ್ಯಕ್ರಮ ನಿರ್ದೇಶಕ ಜೆಸಿ ನಿರಂತ್ ದೇವಸ್ಯ ಉಪಸ್ಥಿತರಿದ್ದರು.

. . . . . . .

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಜೇಸಿಐ ಪಂಜ ಪಂಚಶ್ರೀ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading