ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ವಾಚನ ದಿನಾಚರಣೆ

ಸುಳ್ಯ : ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ವಾಚನ ದಿನಾಚರಣೆಯನ್ನು ಸಂಸ್ಥೆಯ ಸಾಹಿತ್ಯ ಸಮಿತಿಯ ವತಿಯಿಂದ ಜೂನ್ 24, 2026 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರು ಹಾಗೂ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ. ಚಿದಾನಂದ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ನಿವೃತ್ತ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಸೂರ್ಯಕುಮಾರ್ ಕೆ.ಬಿ ಭಾಗವಹಿಸಿ ಓದುವ ಹವ್ಯಾಸದ ಮಹತ್ವ, ಜ್ಞಾನ ವೃದ್ಧಿ ಮತ್ತು ವ್ಯಕ್ತಿತ್ವ ವಿಕಾಸದಲ್ಲಿ ಪುಸ್ತಕಗಳ ಪಾತ್ರದ ಕುರಿತು ಉತ್ತಮ ಮಾಹಿತಿ ನೀಡಿದರು. ಒ.ಬಿ.ಜಿ ವಿಭಾಗದ ಡಾ ವೀಣಾ ಪುಸ್ತಕದ ಕುರಿತಾದ ಸ್ವರಚಿತ ಕವನ ವಾಚಿಸಿದರು. 

. . . . . . . . .

ವೇದಿಕೆಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್, ಫೊರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥರು ಹಾಗೂ ಸಾಹಿತ್ಯ ಸಮಿತಿಯ ಅಧ್ಯಕ್ಷರಾದ ಭರತ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪುಸ್ತಕಗಳ ಕುರಿತಾದ ವಿಶೇಷ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಯಿತು. ಬಳಿಕ ಡಾ. ಸೂರ್ಯಕುಮಾರ್ ಕೆ. ಬಿ ಅವರು ಸ್ವತಃ ರಚಿಸಿದ ಪುಸ್ತಕಗಳನ್ನು ಆಸಕ್ತರಿಗಾಗಿ ಪ್ರದರ್ಶನಕ್ಕೆ ಇಡಲಾಗಿತ್ತು. ಕಾರ್ಯಕ್ರಮದಲ್ಲಿ ಸಾಹಿತ್ಯ ಸಮಿತಿಯ ಕಾರ್ಯದರ್ಶಿ ಮಿಥುನ್ ಎಮ್ ಸ್ವಾಗತಿಸಿದರು. ರಕ್ಷಿತ್ ಭಟ್ ಪ್ರಾರ್ಥಿಸಿದರು, ಸಮಿತಿಯ ಜಂಟಿ ಕಾರ್ಯದರ್ಶಿ ಜಿ.ಎಮ್ ತೇಜಸ್ವಿನಿ ವಂದಿಸಿದರು. ಸಿಯಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು ಪ್ರಾಧ್ಯಾಪಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading