ಜುಲೈ 7ರಂದು ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ – ಲೇಖಕ ಹಾಗೂ ಅಂಕಣಕಾರ ಡಾ. ಸುಂದರ ಕೇನಾಜೆ ಅವರಿಗೆ ಸನ್ಮಾನ

ಸುಳ್ಯ, ಜೂನ್ 27: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.) ವತಿಯಿಂದ ಜುಲೈ 7ರಂದು (ಮಂಗಳವಾರ) ಬೆಳಿಗ್ಗೆ 10 ಗಂಟೆಯಿಂದ ಅಂಬಟೆಡ್ಕದ ಕನ್ನಡ ಭವನದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

. . . . . . . . .

ಕಾರ್ಯಕ್ರಮವನ್ನು ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ಉದ್ಘಾಟಿಸಲಿದ್ದು, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ.

. . . . . . .

ಮೂಡುಬಿದಿರೆಯ ಜೈನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಪ್ರಭಾತ್ ಬಲ್ನಾಡು ಅವರು “ಪ್ರಧಾನ ಉಪನ್ಯಾಸ” ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಲೇಖಕ ಹಾಗೂ ಅಂಕಣಕಾರ ಡಾ. ಸುಂದರ ಕೇನಾಜೆ ಅವರನ್ನು ಸನ್ಮಾನಿಸಲಾಗುವುದು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ಭಾಗವಹಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಗಿರೀಶ್ ಅಡ್ವಂಗಾಯ, ಪ್ರೆಸ್ ಕ್ಲಬ್ ಸುಳ್ಯದ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಹಾಗೂ ಕೋಶಾಧಿಕಾರಿ ಜಯಪ್ರಕಾಶ್ ಕುಕ್ಕೇಟಿ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಕೊರತ್ತೋಡಿ ಉಪಸ್ಥಿತರಿರಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading