ಜು. 6ರಂದು ಸುಳ್ಯದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್‌ಗೆ ಸಾರ್ವಜನಿಕ ಅಭಿನಂದನೆ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವ ಯು.ಟಿ. ಖಾದರ್ ಅವರಿಗೆ ಜು. 6ರಂದು ಸುಳ್ಯದ ಜಾನಕಿ ವೆಂಕಟ್ರಮಣ ಸಭಾಭವನದಲ್ಲಿ ಸುಳ್ಯ ತಾಲೂಕಿನ ಸಾರ್ವಜನಿಕರ ಪರವಾಗಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದರು.

. . . . . . . . .

ಅವರು ಸುಳ್ಯದ ಪತ್ರಿಕಾಭವನದಲ್ಲಿ ಜೂ. 27ರಂದು ಸಚಿವ ಯು.ಟಿ. ಖಾದರ್ ಅಭಿನಂದನಾ ಸಮಿತಿ ವತಿಯಿಂದ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

. . . . . . .

ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಪೇರಡ್ಕ ಜುಮಾ ಮಸೀದಿಯ ಖತೀಬ್ ಅಹ್ಮದ್ ನಈಂ ಮಅಬರಿ ಫೈಝಿ ಹಾಗೂ ಗುತ್ತಿಗಾರಿನ ಸೈಂಟ್ ಮೇರೀಸ್ ಚರ್ಚ್‌ನ ರೆ. ಫಾ. ಥೋಮಸ್ ಪಾರೆಕಟ್ಟೆಲ್ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.

ಸುಳ್ಯ ತಾಲೂಕಿನ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಕಾರ್ಯಕ್ರಮದ ಸ್ಥಳದಲ್ಲಿ ವಿಶೇಷ ಮನವಿ ಸ್ವೀಕಾರ ಕೌಂಟರ್ ತೆರೆಯಲಾಗುವುದು. ಸಾರ್ವಜನಿಕರು ಸಲ್ಲಿಸುವ ಮನವಿ ಹಾಗೂ ಬೇಡಿಕೆಗಳನ್ನು ಕ್ರೋಡೀಕರಿಸಿ, ನಾಲ್ಕು ಜಿಲ್ಲೆಗಳ ಉಸ್ತುವಾರಿ ಸಚಿವರೂ ಆಗಿರುವ ಯು.ಟಿ. ಖಾದರ್ ಅವರಿಗೆ ಸಲ್ಲಿಸಲಾಗುವುದು. ತಾಲೂಕಿನ ಎಲ್ಲಾ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಕೆ.ಎಂ. ಮುಸ್ತಫಾ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸಂದಾನಂದ ಮಾವಜಿ, ಅರೆಭಾಷೆ ಅಕಾಡೆಮಿ ಸದಸ್ಯ ಎನ್.ಎ. ಜ್ಞಾನೇಶ್ ಹಾಗೂ ಕಾಂಗ್ರೆಸ್ ಮುಖಂಡ ಮೂಸಾ ಪೈಂಬೆಚ್ಚಾಲ್, ಉಬರಡ್ಕ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್ ರೈ ಉಬರಡ್ಕ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading