- Thursday
- July 16th, 2026
ಸುಬ್ರಹ್ಮಣ್ಯ ಜೂನ್ 28 : ಭಾನುವಾರ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇವುಗಳ ಆಶ್ರಯದಲ್ಲಿ ಕುಕ್ಕೆ ಶ್ರೀ ದೇವಳದ ಮುಂಭಾಗದಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶ್ರೀ ದೇವಳದ ಗೋಪುರ ಸಮೀಪ ವ್ಯವಸ್ಥಾಪನಾ ಸಮಿತಿ ಸದಸ್ಯ...
ದಿನಾಂಕ : 28-06-2026ವಾರ : ಭಾನುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷ ರಾಶಿ : ಇಂದು ನಿಮಗೆ ಸಾಮಾನ್ಯ ದಿನವಾಗಲಿದೆ. ಅನಾವಶ್ಯಕವಾಗಿ ವಾದದಲ್ಲಿ ತೊಡಗುವ ಮೂಲಕ ನೀವು ಕೆಲವು ತೊಂದರೆಗಳಿಗೆ ಸಿಲುಕಿಕೊಳ್ಳಬಹುದು, ಆದ್ದರಿಂದ ನೀವು ಯಾರೊಂದಿಗಾದರೂ ಮಾತನಾಡುವಾಗ ಬಹಳ ಯೋಚಿಸಿ ಮಾತನಾಡಿ, ನಿಮ್ಮ ಉತ್ತಮ ಆಲೋಚನೆಯೊಂದಿಗೆ ಕೆಲಸದ ಸ್ಥಳದಲ್ಲಿ ನಿಮ್ಮ ಅಧಿಕಾರಿಗಳು ಸಹ ಸಂತೋಷವಾಗಿರುತ್ತಾರೆ......
ಮಡಪ್ಪಾಡಿ ಗ್ರಾಮದ ಕಡ್ಯ ಪೆರಾಲು ದಿ.ಲಕ್ಷ್ಮಣ ಗೌಡರ ಧರ್ಮಪತ್ನಿ ಶ್ರೀಮತಿ ಹೊನ್ನಮ್ಮ ಕಡ್ಯ ರವರು ಜೂ.27ರಂದು ರಾತ್ರಿ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರ ದೇಹವು ಇಂದು ಬೆಳಿಗ್ಗೆ 8:00 ಗಂಟೆಗೆ ಕಡ್ಯ ಮನೆಗೆ ತಲುಪಿದ್ದು, ಬೆಳಿಗ್ಗೆ 10:00 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸುಬ್ರಹ್ಮಣ್ಯ ಜೂನ್ 27 : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೂ.27 ಶನಿವಾರದಂದು 40 ಸಾವಿರಕ್ಕಿಂತಲೂ ಅಧಿಕ ಭಕ್ತಾಧಿಗಳ ಆಗಮನವಾಗಿದೆ. ಶುಕ್ರವಾರ ರಂಜಾನ್ ರಜೆ, ಶನಿವಾರ ನಾಲ್ಕನೇ ಶನಿವಾರ ರಜೆ ಹಾಗೂ ಆದಿತ್ಯವಾರ ರಜೆಯಾಗಿ ಸರಣಿ ರಜೆಗಳು ಬಂದ ಕಾರಣ ಸರಕಾರಿ ಕಚೇರಿಗಳು ಇನ್ನಿತರ ಸಂಘ-ಸಂಸ್ಥೆಗಳ...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 22 ಸೋಮವಾರದಿಂದ ಜೂನ್ 27...
ಸುಳ್ಯ, ಜೂನ್ 27: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.) ವತಿಯಿಂದ ಜುಲೈ 7ರಂದು (ಮಂಗಳವಾರ) ಬೆಳಿಗ್ಗೆ 10 ಗಂಟೆಯಿಂದ ಅಂಬಟೆಡ್ಕದ ಕನ್ನಡ ಭವನದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ಉದ್ಘಾಟಿಸಲಿದ್ದು, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್...
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮವು ಜೂ.27ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಜಯಾನಂದ ಪಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸಿಐ 15 ವಲಯ ಅಧ್ಯಕ್ಷ ಜೆಎಫ್ಎಸ್ ಸಂತೋಷ್ ಶೆಟ್ಟಿ ಆಗಮಿಸಿದ್ದರು.ಅತಿಥಿಗಳಾಗಿ ಜೇಸಿಐ ವಲಯ- 15 ನೇತ್ರಾವತಿ (ರಿಜನ್ -ಬಿ)...
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವ ಯು.ಟಿ. ಖಾದರ್ ಅವರಿಗೆ ಜು. 6ರಂದು ಸುಳ್ಯದ ಜಾನಕಿ ವೆಂಕಟ್ರಮಣ ಸಭಾಭವನದಲ್ಲಿ ಸುಳ್ಯ ತಾಲೂಕಿನ ಸಾರ್ವಜನಿಕರ ಪರವಾಗಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದರು. ಅವರು ಸುಳ್ಯದ ಪತ್ರಿಕಾಭವನದಲ್ಲಿ ಜೂ. 27ರಂದು...
ರಾಜ್ಯದಲ್ಲಿರುವ ಸರಕಾರಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸಿ ಟಾಟಾ ಪವರ್ ಕಂಪನಿಗೆ ಲೈಸನ್ಸ್ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದೆ.ಖಾಸಗೀಕರಣದಿಂದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತದೆ. ಸರಕಾರದಿಂದ ರೈತರು ಹಾಗೂ ಗ್ರಾಹಕರಿಗೆ ಸಿಗುವ ವಿವಿಧ ಸೌಲಭ್ಯಗಳು ಕಡಿತಗೊಳ್ಳುವ ಸಾಧ್ಯತೆಯಿದೆ. ಆದುದರಿಂದ ಲಾಭದಲ್ಲಿ ಇರುವ ಮೆಸ್ಕಾಂ...
Loading posts...
All posts loaded
No more posts
