- Tuesday
- September 1st, 2026
ಸುಬ್ರಹ್ಮಣ್ಯ ಜೂನ್ 05 : ಸುಬ್ರಹ್ಮಣ್ಯದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವವು ಸಂಭ್ರಮದಿಂದ ಜೂನ್ 01 ರಂದು ಜರಗಿತು. ಆರಂಭದಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಾಲಾ ಆವರಣದಿಂದ ಕಾಶಿಕಟ್ಟೆ ಗಣಪತಿ ದೇವಸ್ಥಾನದ ವೃತ್ತದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದರು. ತದನಂತರ ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ...
“ರಾಜ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಉಚಿತ ಬಸ್ ಪ್ರಯಾಣ ಯೋಜನೆ ವಿದ್ಯಾರ್ಥಿ ಸಮುದಾಯಕ್ಕೆ ದೊಡ್ಡ ವರದಾನವಾಗಿದೆ” ಎಂದು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ತಿಳಿಸಿದ್ದಾರೆ. “ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ನೇರ ಪ್ರಯೋಜನವಾಗಲಿದೆ. ವಿಶೇಷವಾಗಿ...
ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ಮತ್ತು ತಾಯಂದಿರ ಸಭೆ, ಪೌಷ್ಟಿಕ ಆಹಾರ ಶಿಬಿರ, ಪೋಷನ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಅನ್ನಪ್ರಾಶನ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಮುಖ್ಯೋಪಾಧ್ಯಾಯ ಮಾಯಿಲಪ್ಪ.ಜಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಸಹಾಯಕಿ...
ನವೋದಯ ಮತ್ತು ಮೊರಾರ್ಜಿ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಗತಿಗಳು ಜೂ.07 ರಿಂದ ಆರಂಭಗೊಳ್ಳಲಿದೆ. ಪ್ರಸ್ತುತ ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾನಸಿಕ ಸಾಮರ್ಥ್ಯ, ಗಣಿತ ಮತ್ತು ಭಾಷಾ ವಿಷಯಗಳಿಗೆ ಸಂಬಂಧಿಸಿದ ತರಗತಿಗಳು ನಡೆಯಲಿದೆ. ಈಗಾಗಲೇ ಜ್ಞಾನದೀಪ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 223 ವಿದ್ಯಾರ್ಥಿಗಳು...
ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ” ಯನ್ನು ಜೂ. 04ರಂದು ಕಾಲೇಜಿನ ಶ್ವಾಸಕೋಶ ವೈದ್ಯಕೀಯ ವಿಭಾಗದ ಆಯೋಜನೆಯಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ಹಾಗೂ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಸಹಯೋಗದೊಂದಿಗೆ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ...
ಸುಳ್ಯದ ಕಾರ್ಣಿಕ ಕ್ಷೇತ್ರವಾಗಿರುವ ಶ್ರೀ ಕಲ್ಕುಡ ದೈವಸ್ಥಾನ ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ನವೀಕೃತಗೊಂಡು ಸುಂದರವಾದ ಶಿಲಾಮಯ ಗುಡಿ ನಿರ್ಮಾವಾಗಿದೆ. ಜೂ.15 ರಿಂದ 18 ರವರೆಗೆ ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ದೈವದ ಪುನರ್ ಪ್ರತಿಷ್ಠಾ ಕಲಶೋತ್ಸವ ನಡೆಯಲಿದೆ.ಜೂ.15 ರಂದು ಪೂರ್ವಾಹ್ನ ಗಂಟೆ 9:00 ರಿಂದ ದಶಮ ಸ್ಕಂದ ಪಾರಾಯಣವೂ ನಾರಾಯಣ ಮೂರ್ತಿ ಕಾಂಞಗಾಡ್...
ಗೋ ಗ್ರೀನ್ ಅಭಿಯಾನ “ಇಂದು ಗಿಡ ನೆಡಿ - ನಾಳೆಯನ್ನು ರಕ್ಷಿಸಿ” ಎನ್ನುವಂತೆ ಜೇಸಿಐ ಇಂಡಿಯಾ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿವಿಧ ಪರಿಸರ ಸಂವರ್ಧಿತ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅದರಂತೆ ಪರಿಸರ ಸಂರಕ್ಷಣೆ ಹಾಗೂ ಹಸಿರು ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡುವ ವ್ಯಕ್ತಿ ಯಾ ಸಂಘ - ಸಂಸ್ಥೆಯನ್ನು ಗುರುತಿಸಿ ಗೌರವಿಸುವುದ್ದಾಗಿದ್ದು, ಅದರಂತೆ ಜೇಸಿವಿ...
ಪೆರುವಾಜೆ, ಜೂನ್ 5: ಪೆರುವಾಜೆಯ ವನಶ್ರೀ ಸಮೀಪ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓಮಿನಿ ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಓಮಿನಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ...
ಸುಳ್ಯ, ಜೂ. 5: ಕೆಎಫ್‌ಡಿಸಿ ವಿಚಾರದಲ್ಲಿ ಸ್ಥಳೀಯವಾಗಿ ಹಲವು ಸಂಘಟನೆಗಳು ನಿರಂತರ ಹೋರಾಟ ನಡೆಸಿದ್ದು, ಅದರ ಫಲವಾಗಿ ಕಾರ್ಖಾನೆ ಕಾರ್ಮಿಕರಿಗೆ ಮಾತ್ರ ಸೀಮಿತವಾಗಿದ್ದ ಇಎಸ್‌ಐ (ESI) ಸೇವೆಯನ್ನು ಎಲ್ಲಾ ಖಾಯಂ ಕಾರ್ಮಿಕರಿಗೆ ವಿಸ್ತರಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದರು. ಅವರು ಸುಳ್ಯದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಎಫ್‌ಡಿಸಿ ಕಾರ್ಮಿಕರ...
ಹೌದು ಯುವ ಮಿತ್ರರೇ ಪ್ರಕೃತಿಯನ್ನು ಪೋಷಿಸಿದರೆ ನಮ್ಮ ಉಸಿರು ಹೆಚ್ಚಿದಂತೆ. ಹಾಗಾಗಿ ಹಿಂದಿನ ಜಾಯಮಾನದಲ್ಲಿ ಹಸಿರೆಂಬೆ ತಾಣವನ್ನು ಮರೆತು ಕಾಂಕ್ರೀಟ್ ನತ್ತ ದಾಪುಗಾಲನ್ನಿಟ್ಟು ಹಸಿರೆಂಬ ಉಯ್ಯಾಲೆಯನ್ನು ಮರೆತನೆ ಮಾನವ ಇಂದು..! ದಟ್ಟವಾಗಿ ಬೆಳೆದಿರುವ ಕಾಡುಗಳು ಬೆಳಗಾಗುವುದರಲ್ಲಿ ಕಣ್ಮರೆಯಾಗಿ ಹಸಿರೆಂಬ ಮೂರಕ್ಷರವು ನಿಧಾನವಾಗಿ ಹೆಸರಿಲ್ಲದಂತೆ ಮಾಯವಾಗುತ್ತಿದೆ. ಬರಡು ಮೈಯ ಧರೆಯ ಒಡಲನ್ನು ಸೂರ್ಯ ರಶ್ಮಿಯು ಬಿಸಿ ಬೇಗೆಯಿಂದ...
Loading posts...
All posts loaded
No more posts
