- Thursday
- August 20th, 2026
ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಜು.01 ರಂದು ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ಮುಖ್ಯಸ್ಥರಾದ ಪ್ರದೀಪ್ ಕರಿಕೆ ನಡೆಸಿಕೊಟ್ಟರು. ತೆಂಗಿನ ಗೆರಟೆಯಲ್ಲಿ ವಿವಿಧ ಗೃಹ ಉಪಯೋಗಿ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ವಿಧಾನವನ್ನು ಪ್ರಾತ್ಯಕ್ಷಿತೆ ಮೂಲಕ ತೊರಿಸಲಾಯಿತು. ಸ್ವದೇಶಿ ನಿರ್ಮಿತ ವಸ್ತುವಿನ ಬಳಕೆಯಿಂದ ಪರಿಸರ ಸಂರಕ್ಷಣೆಯ ಜೊತೆಗೆ ದೇಹದ ಆರೋಗ್ಯಕ್ಕೆ ಮತ್ತು...
ಸುಳ್ಯದ ಶ್ರೀರಾಂಪೇಟೆಯಲ್ಲಿ ಅಮೂಲ್ಯ ದಾಖಲೆ ಹಾಗೂ ಹಣವಿದ್ದ ಪರ್ಸ್ ಬಿದ್ದು ಹೋಗಿತ್ತು. ಅದು ಸುಳ್ಯದ ವಿನಾಯಕ ಎಲೆಕ್ಟ್ರಾನಿಕ್ಸ್ ನ ಮಾಲಕರಿಗೆ ಸಿಕ್ಕಿತ್ತು. ಅವರು ಅದರಲ್ಲಿ ನಂಬರ್ ಗೆ ಕರೆ ಮಾಡಿ ಪರ್ಸನ್ನು ಹಿಂತಿರುಗಿಸಿದ್ದಾರೆ. ಪ್ರಾಮಾಣಿಕತೆ ಮೆರೆದ ಸುಧೀರ್ ನಾಯಕ್ ಮತ್ತು ಮನೆಯವರಿಗೆ ರಮ್ಯಶ್ರೀ ನಡುಮನೆ ಕೃತಜ್ಞತೆ ಸಲ್ಲಿಸಿದ್ದಾರೆ.
ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪೋಷಕರ ಸಭೆಯು ಜೂ.20ರಂದು ನಡೆದಿದ್ದು, ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿಯ ತೆರವಾದ ನಾಲ್ಕು ಸ್ಥಾನಗಳಿಗೆ ಸದಸ್ಯರ ಹಾಗೂ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನೂತನ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ.ಎನ್.ಜಿ ಇವರು ಆಯ್ಕೆಯಾಗಿದ್ದಾರೆ. ಸುಳ್ಯದಲ್ಲಿ ವಕೀಲರಾಗಿರುವ ಇವರು ಈ ಹಿಂದೆ ಸತತ 09 ವರ್ಷಗಳ ಕಾಲ ಬಂಗ್ಲೆಗುಡ್ಡೆ ಸರಕಾರಿ...
ಸುಳ್ಯ ತಾಲೂಕು ಬಿ.ಎಂ.ಎಸ್ ಸಂಯೋಜಿತ ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜೂ.30ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ಮಧು ಗೋಳ್ಯಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಂಡು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಲೋಕೇಶ್.ಹೆಚ್,...
“ಶರೀರೇ ಜರ್ಝರೀಭೂತೇ ವ್ಯಾಧಿಗ್ರಸ್ಥೇ ಕಳೇಬರೇ ಔಷಧಂ ಜಾಹ್ನವೀತೋಯಂ ವೈದ್ಯೋ ನಾರಾಯಣೋ ಹರಿಃ” ಅಂದರೆ ದೇಹವು ಜರ್ಜರಿತವಾದಾಗ, ರೋಗಗಳಿಂದ ಆವೃತ್ತವಾದಾಗ ದೇಹಕ್ಕೆ ಗಂಗಾ ನದಿಯ ನೀರೇ ಔಷಧ ಹಾಗೂ ವೈದ್ಯರೇ ಸಾಕ್ಷಾತ್ ಹರಿ ಅಥವಾ ನಾರಾಯಣ ದೇವರು ಎಂಬಂತೆ ಸ್ವತಃ ಭಗವಂತ ಅಥವಾ ಆ ದೇವರು ಮಾಡುವಂತಹ ಜೀವ ಉಳಿಸುವ ಕಾಯಕವನ್ನು ದಿನದ 24 ಗಂಟೆಯೂ ಕೂಡ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಮತ್ತು...
ದಿನಾಂಕ : 01 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ 470ಹಳೆ...
ಸುಳ್ಯ ಪಿ.ಎಲ್.ಡಿ ಬ್ಯಾಂಕ್ ವತಿಯಿಂದ ಕೇಂದ್ರ ಸರ್ಕಾರದ "ಸಹಕಾರ ವಾರ" ಕಾರ್ಯಕ್ರಮದ ಅಂಗವಾಗಿ ಶಾಲಾ ಅವರಣದಲ್ಲಿ ನಾನಾ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸುಳ್ಯ ಪಿ.ಎಲ್.ಡಿ ಬ್ಯಾಂಕ್‌ನ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ದಿಲೀಪ್ ಹೆಚ್.ಹೆಚ್, ಸುಳ್ಯ ವ್ಯವಸ್ಥಾಪಕಿ ಉಷಾ ಸುವರ್ಣ, ಸಿಬ್ಬಂದಿಗಳಾದ ದಾಮೋದರ, ಅಶ್ವಿತ್, ಶಾಲಾ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಡಿಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದಾದ್ಯಂತ ಆನ್ಲೈನ್ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಸುಳ್ಯದ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಪೂಜ್ಯ ವೀರೇಂದ್ರ ಹೆಗ್ಗಡೆಯವರು “ಜನಜಾಗೃತಿ ಮೂಲಕ...
ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತು ಚುನಾವಣೆಯನ್ನು ನಡೆಸಲಾಯಿತು. ಈ ಚುನಾವಣೆಯನ್ನು ಆಧುನಿಕ ತಂತ್ರಜ್ಞಾನದ ನೆರವಿನಿಂದ ಮೊಬೈಲ್ ಅಪ್ಲಿಕೇಶನ್ ಬಳಸಿ ಇಲೆಕ್ಟ್ರಾನಿಕ್ ಮತಯಂತ್ರ(EVM) ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಗೌರವ...
Loading posts...
All posts loaded
No more posts
