ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; “ದುಶ್ಚಟಮುಕ್ತ ಬದುಕಿನಿಂದ ಯುವಜನಾಂಗದ ಅಭ್ಯುದಯ” : ವಿಮಲಾ ರಂಗಯ್ಯ ಅಭಿಮತ

ಸುಬ್ರಹ್ಮಣ್ಯ : “ದುಶ್ಚಟಮುಕ್ತ ಬದುಕಿನಿಂದ ಯುವ ಜನಾಂಗ ಅಭ್ಯುದಯವಾಗಲು ಸಾಧ್ಯವಿದೆ. ವಿದ್ಯಾರ್ಜನೆಯ ಅವಧಿಯಲ್ಲಿಯೇ ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಜಾಗೃತರಾಗಬೇಕು. ಇದು ಓದು ಬರಹಗಳನ್ನು ಸೇರಿದಂತೆ ನಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡುತ್ತದೆ ಎಂಬ ಪರಿಜ್ಞಾನ ಎಳವೆಯಲ್ಲಿಯೇ ಮೂಡುವಂತೆ ಮಾಡುವುದು ಅತ್ಯವಶ್ಯಕ. ಧೂಮಪಾನ, ಮದ್ಯಪಾನ ಇತ್ಯಾದಿಗಳು ನಮ್ಮ ಬದುಕಿನ ಅತೀ ದೊಡ್ಡ ಶತ್ರುಗಳು ಎಂಬ ಅರಿವು ನಮ್ಮ ಜೀವಿತಾವಧಿಯುದ್ದಕ್ಕೂ ಇರಬೇಕು. ಆದುದರಿಂದ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಂತ ಜೀವನ ನಡೆಸಬೇಕು” ಎಂದು ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷೆ ವಿಮಲಾ ರಂಗಯ್ಯ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಜನಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ, ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು, ಸುಬ್ರಹ್ಮಣ್ಯ ಪೋಲೀಸ್ ಠಾಣೆ, ಪೊಲೀಸ್ ಇಲಾಖೆ ದ.ಕ, ಇವುಗಳ ಆಶ್ರಯದಲ್ಲಿ ಸುಬ್ರಹ್ಮಣ್ಯದ ಎಸ್‌.ಎಸ್‌.ಪಿ.ಯು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಮಂಗಳವಾರ ನಡೆದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

. . . . . . . . .

ಸುಬ್ರಹ್ಮಣ್ಯ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಸತೀಶ್ ಟಿ.ಎನ್ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಠಾಣಾಧಿಕಾರಿ ಆಂಜನೇಯ ರೆಡ್ಡಿ, ಎಸ್.ಎಸ್.ಪಿ.ಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್, ಕುಲ್ಕುಂದ ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ, ಸಂಪನ್ಮೂಲ ವ್ಯಕ್ತಿ ಲೋಕೇಶ್ ಪೀರನಮನೆ, ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಪವಿತ್ರಾ ದಿನೇಶ್, ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ.ಕೆ, ಸೇವಾ ಪ್ರತಿನಿಧಿ ಶೈಲಜಾ ಪ್ರವೀಣ್ ವೇದಿಕೆಯಲ್ಲಿದ್ದರು. 

. . . . . . .

ಬಳಿಕ ಸಂಪನ್ಮೂಲ ವ್ಯಕ್ತಿ ಲೋಕೇಶ್ ಪೀರನಮನೆ ಮಾದಕ ವಸ್ತು ವಿರುದ್ದ ಮಾಹಿತಿ ನೀಡಿದರು. ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ಗಣಕವಿಜ್ಞಾನ ಉಪನ್ಯಾಸಕ ಶ್ರೀಧರ್ ಪುತ್ರನ್, ಕಾಲೇಜಿನ ಸಿಬ್ಬಂದಿ ಮಹೇಶ್ ಕೆ.ಎಚ್ ಸಹಕರಿಸಿದರು. ಬಳಿಕ ಆನ್‌ಲೈನ್ ಮೂಲಕ ರಾಜ್ಯ ಮಟ್ಟದಲ್ಲಿ ನಡೆದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading