ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ತು ಚುನಾವಣೆ

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತು ಚುನಾವಣೆಯನ್ನು ನಡೆಸಲಾಯಿತು.

. . . . . . . . .

ಈ ಚುನಾವಣೆಯನ್ನು ಆಧುನಿಕ ತಂತ್ರಜ್ಞಾನದ ನೆರವಿನಿಂದ ಮೊಬೈಲ್ ಅಪ್ಲಿಕೇಶನ್ ಬಳಸಿ ಇಲೆಕ್ಟ್ರಾನಿಕ್ ಮತಯಂತ್ರ(EVM) ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಗೌರವ ಸಲ್ಲಿಸಿದರು.

. . . . . . .

ಚುನಾವಣಾ ಅಧಿಕಾರಿಗಳಾಗಿ ಪದ್ಮ ಕುಮಾರ್, ಕಿಶೋರ್ ಕುಮಾರ್, ಮೋಹನ್ ಚಂದ್ರ ಅವರು ಕಾರ್ಯನಿರ್ವಹಿಸಿ ಚುನಾವಣಾ ಪ್ರಕ್ರಿಯೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲರಾದ ರಮೇಶ್.ಎಸ್ ಮುಖ್ಯೋಪಾಧ್ಯಾಯರಾದ ಸೋಮಶೇಖರ್ ಮಾರ್ಗದರ್ಶನ ಮಾಡಿದರು. ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಚುನಾವಣೆಯ ಯಶಸ್ವಿ ನಿರ್ವಹಣೆಗೆ ಸಂಪೂರ್ಣ ಸಹಕಾರ ನೀಡಿದರು.

ಚುನಾವಣೆಯಲ್ಲಿ ಕಾಲೇಜು ವಿಭಾಗದ ನಾಯಕನಾಗಿ ದ್ವಿತೀಯ ವಿಜ್ಞಾನ ವಿಭಾಗದ ಗುರುರಾಜ್ ಕೆ.ಡಿ, ಉಪನಾಯಕನಾಗಿ ಪ್ರಥಮ ವಿಜ್ಞಾನ ವಿಭಾಗದ ಲೇಖನ್ ಪ್ರಿಯ.ಎಂ ಹಾಗೂ ಪ್ರೌಢಶಾಲಾ ವಿಭಾಗದ ಹತ್ತನೇ ತರಗತಿಯ ಶುಶಾಂಕ್ ಕೆ.ಜೆ, ನಾಯಕನಾಗಿ ಮತ್ತು ಒಂಭತ್ತನೇ ತರಗತಿಯ ತೇಜಸ್ ಗೌಡ ಪಿ.ಎಸ್, ಉಪನಾಯಕನಾಗಿ ಆಯ್ಕೆಯಾದರು. ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಅಭಿನಂದಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading