ಬೋರುಗುಡ್ಡೆ ರಸ್ತೆ ದುರಸ್ತಿಗೆ ಆಗ್ರಹಿಸಿ ಎಸ್‌.ಡಿ.ಪಿ.ಐ ನಿಂದ ನಗರಾಭಿವೃದ್ಧಿ ಇಲಾಖೆಗೆ ದೂರು

ಸುಳ್ಯ ಪಟ್ಟಣ ಪಂಚಾಯತ್ ನ ಬೋರುಗುಡ್ಡೆ ಪ್ರದೇಶದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ಹಿಂದೆ ಮನವಿ ಸಲ್ಲಿಸಿದ್ದರು. ನಗರ ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳದ ಕಾರಣ ಈ ಬಾರಿ ನೇರವಾಗಿ ನಗರಾಭಿವೃದ್ಧಿ ಇಲಾಖೆಗೆ ಎಸ್‌.ಡಿ.ಪಿ.ಐ ನಾವೂರು ಬ್ರಾಂಚ್ ಕಾರ್ಯದರ್ಶಿ ಮೊಹಮ್ಮದ್ ಸಾಜಿದ್ ರವರು ದೂರು ಸಲ್ಲಿಸಿದ್ದಾರೆ.

. . . . . . . . .

ದೂರಿನಲ್ಲಿ ಸ್ಥಳೀಯರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಿಂದೆ ಇಂಟರ್‌ಲಾಕ್ ಅಳವಡಿಸಲಾಗಿದ್ದ ರಸ್ತೆಯು ಕೂಡ ಭಾರಿ ವಾಹನಗಳ ಸಂಚಾರದಿಂದಾಗಿ ಸಂಪೂರ್ಣ ಎದ್ದು ಹೋಗಿದ್ದು, ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಈ ರಸ್ತೆಯ ದುಸ್ಥಿತಿಯಿಂದಾಗಿ ಶಾಲಾ ವಿದ್ಯಾರ್ಥಿಗಳು, ವೃದ್ಧರು ಮತ್ತು ಅಂಗವಿಕಲರ ದೈನಂದಿನ ಓಡಾಟಕ್ಕೆ ತೊಂದರೆಯಾಗಿದೆ.‌ ಈ ಕುರಿತು ಹಲವು ಬಾರಿ ಪಂಚಾಯಿಯತ್ ಗೆ ಮನವಿ ಸಲ್ಲಿಸಿದ್ದರೂ, ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಬಗೆಹರಿದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ನಗರ ಪಂಚಾಯತ್ ತಕ್ಷಣವೇ ಎಚ್ಚೆತ್ತುಕೊಂಡು ರಸ್ತೆಯನ್ನು ದುರಸ್ತಿಗೊಳಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮೊಹಮ್ಮದ್ ಸಾಜಿದ್ ಆಗ್ರಹಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading