ಪಂಚಭೂತಗಳಲ್ಲಿ ಲೀನವಾದ ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್‌ – ಸರ್ಕಾರದ ಗೌರವದೊಂದಿಗೆ ವಿದಾಯ – ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಸೇರಿದಂತೆ ಸಾವಿರಾರು ಅಭಿಮಾನಿಗಳಿಂದ ಅಂತಿಮ ದರ್ಶನ

ತೂಗುಸೇತುವೆಗಳ ನಿರ್ಮಿಸುವ ಗ್ರಾಮೀಣ ಜನರ ಬದುಕಿಗೆ ನೆರವಾಗಿ “ಬ್ರಿಡ್ಜ್ ಮ್ಯಾನ್” ಎಂದೇ ಪ್ರಸಿದ್ಧಿಯಾಗಿ ಭಾರತ ಸರ್ಕಾರಿಂದ ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಜನಪ್ರತಿನಿಧಿ ಹಾಗೂ ಅಧಿಕಾರಿಗಳು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾವಿರಾರು ಜನ ಅಂತಿಮ ದರ್ಶನ ಪಡೆದರು.

. . . . . . . . .

ಅರಂಬೂರಿನ ಅವರ ನಿವಾಸದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ ನಡೆಯಿತು. ಪುತ್ರರಾದ ಪತಂಜಲಿ ಭಾರಧ್ವಾಜ್ ಹಾಗೂ ಸುದರ್ಶನ ಭಾರಧ್ವಾಜ್ ಕಾರ್ಯ ನಡೆಸಿದರು. ಜಿಲ್ಲಾಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಿ, ಪಾರ್ಥಿವ ಶರೀರಕ್ಕೆ ಪುಷ್ಪನಮನ ಅರ್ಪಿಸಲಾಯಿತು.

ಅಂತ್ಯಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಆರ್. ಅರುಣ್ ಕುಮಾರ್, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪ್ರಭಾಕರ ಭಟ್ ಕಲ್ಲಡ್ಕ, ಸುಳ್ಯ ತಹಶೀಲ್ದಾರ್ ಮಂಜುಳಾ, ರಾಜ್ಯ ಕಾರ್ಮಿಕ ವೇತನ ಸಲಹಾ ಮಂಡಳಿ ಸದಸ್ಯ ಟಿ. ಎಂ. ಶಾಹಿದ್, ಸೂಡ ಅಧ್ಯಕ್ಷ ಮುಸ್ತಫ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಆಗಮಿಸಿ ಗೌರವ ನಮನ ಸಲ್ಲಿಸಿದರು.

. . . . . . .

ನದಿ, ತೊರೆಗಳನ್ನು ದಾಟಲು ಕಷ್ಟಪಡುತ್ತಿದ್ದ ಕಾಲದಲ್ಲಿ ಗ್ರಾಮೀಣ ಪ್ರದೇಶಗಳ ಜನರ ಬದುಕಿಗೆ ಹೊಸ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಕಡಿಮೆ ವೆಚ್ಚದಲ್ಲಿ ನೂರಾರು ತೂಗುಸೇತುವೆಗಳನ್ನು ನಿರ್ಮಿಸಿದ್ದ ಡಾ. ಗಿರೀಶ್ ಭಾರದ್ವಾಜ್ ಅವರ ಸೇವಾಗುಣ, ತನ್ನ ಸಿಬ್ಬಂದಿಗಳು ಸೇರಿದಂತೆ ಎಲ್ಲರನ್ನು ಆತ್ಮೀಯವಾಗಿ ಮಾತನಾಡಿಸುವ ಸಹಾಯ ಮಾಡುವ ಹೃದಯ ವೈಶ್ಯಾಲತೆ, ತಾಂತ್ರಿಕ ಪ್ರತಿಭೆ, ಸರಳ ವ್ಯಕ್ತಿತ್ವ ಹಾಗೂ ಸಮಾಜಮುಖಿ ಚಿಂತನೆಯನ್ನು ಜನ ಈ ಸಂದರ್ಭದಲ್ಲಿ ಸ್ಮರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading