ಜು.09 ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾ ದಿನಾಚರಣೆ

ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಜು.09 ರಂದು ಪೂರ್ವಾಹ್ನ ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯ ಇದರ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ.

. . . . . . . . .

ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್ ಬಾಲಕೃಷ್ಣ ಕೊಯಿಲ ವಹಿಸಲಿದ್ದಾರೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ದಾಯ್ಜಿ ವರ್ಲ್ಡ್ ನ ಮುಖ್ಯಸ್ಥ ವಾಲ್ಟರ್ ನಂದಳಿಕೆ, ಶ್ರೀನಿವಾಸ ನಾಯಕ್ ಇಂದಾಜೆ, ಪುಷ್ಪರಾಜ್ ಬಿ.ಎಸ್, ಸೋಮಶೇಖರ ನಾಯಕ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ

. . . . . . .

ವಾಲ್ಟರ್ ನಂದಳಿಕೆ ಅವರು “ವಿದ್ಯಾರ್ಥಿಗಳ ಭವಿಷ್ಯಕ್ಕೆ ಪತ್ರಿಕೋದ್ಯಮದ ಅಧ್ಯಯನ” ಎಂಬ ವಿಚಾರವಾಗಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಸನ್ಮಾನ ಹಾಗೂ ಬಹುಮಾನ ವಿತರಣೆ ನಡೆಯಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading