ಕುಕ್ಕುಜಡ್ಕ ಶಾಲೆಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಣೆ

ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ವತಿಯಿಂದ ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಿಸಲಾಯಿತು.

. . . . . . . . .

ಸಂಘದ ಮೀಡಿಯಾ ಕಾರ್ಯದರ್ಶಿ ಪುನೀತ್ ಸಂಕೇಶ ಅವರು ಶಾಲೆಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಹಸ್ತಾಂತರಿಸಿದರು. ಚೊಕ್ಕಾಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನ ಸಂಕೀರ್ಣ ಎ.ಎಲ್. ಹಾಗೂ ಶಾಲೆಯ ಸಂಚಾಲಕ ಸುಪ್ರೀತ್ ಮೊಂಟೆಡ್ಕ ಅವರು ಪೆಟ್ಟಿಗೆಯನ್ನು ಸ್ವೀಕರಿಸಿದರು. ಇದೇ ವೇಳೆ ಕುಕ್ಕುಜಡ್ಕ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸವಿತಾ ಕೆ.ಕೆ. ಅವರು ಪ್ರಥಮ ಚಿಕಿತ್ಸಾ ಪೆಟ್ಟಿಗೆಯನ್ನು ಸ್ವೀಕರಿಸಿದರು.

. . . . . . .

ಶಾಲಾ ವಿದ್ಯಾರ್ಥಿಗಳ ತುರ್ತು ಆರೋಗ್ಯ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಈ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ವಿತರಿಸಲಾಗಿದ್ದು, ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ಈ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ಶಾಲಾ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading