ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನಸಹಿತ ಮಾತೃತ್ವ ರಜೆ: ಕಾಂಗ್ರೆಸ್ ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು, ಜು.17: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕಿಯರಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ಕೊಡುಗೆಯನ್ನು ಘೋಷಿಸಿದೆ. ಇನ್ನು ಮುಂದೆ 90 ದಿನಗಳ ವೇತನಸಹಿತ ಮಾತೃತ್ವ ರಜೆ ನೀಡಲಾಗುವುದು.

. . . . . . . . .

ಮಾತೃತ್ವ ರಜೆಯ ಅವಧಿಯಲ್ಲಿ ಬೋಧನಾ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ, ಆ ಅವಧಿಗೆ ಬದಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೂ ವ್ಯತ್ಯಯವಾಗುವುದಿಲ್ಲ.

. . . . . . .

ಈ ನಿರ್ಧಾರದಿಂದ ಅತಿಥಿ ಉಪನ್ಯಾಸಕಿಯರಿಗೆ ಆರ್ಥಿಕ ಭದ್ರತೆಯೊಂದಿಗೆ ಮಾತೃತ್ವದ ಅವಧಿಯನ್ನು ನೆಮ್ಮದಿಯಿಂದ ಕಳೆಯಲು ನೆರವಾಗಲಿದ್ದು, ಅವರ ಉದ್ಯೋಗ ಭದ್ರತೆ ಮತ್ತು ಆತ್ಮಸ್ಥೈರ್ಯ ಹೆಚ್ಚಲಿದೆ ಎಂದು ಸರ್ಕಾರ ತಿಳಿಸಿದೆ.

ರಾಜ್ಯದ ಸಾವಿರಾರು ಅತಿಥಿ ಉಪನ್ಯಾಸಕಿಯರು ಸರ್ಕಾರದ ಈ ಕ್ರಮವನ್ನು ಸ್ವಾಗತಿಸಿದ್ದು, ಮಹಿಳಾ ಸ್ನೇಹಿ ಹಾಗೂ ಕಾರ್ಮಿಕ ಕಲ್ಯಾಣದ ದೃಷ್ಟಿಯಿಂದ ಇದು ಮಹತ್ವದ ನಿರ್ಧಾರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading