ಏನೆಕಲ್ಲು : ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಯುವಕ ಪೊಲೀಸ್ ವಶಕ್ಕೆ

ಜು.16 : ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಕಲ್ಲಾಜೆ ದೇವನಹಳ್ಳಿ ಪ್ರದೇಶದಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

. . . . . . . . .

ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ಅಪ್ರಾಪ್ತ ಪುತ್ರಿ ಜುಲೈ 07ರಂದು ಏನೆಕಲ್ಲು ಗ್ರಾಮದ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದು, ಜುಲೈ 09ರಂದು ಮನೆಗೆ ಹಿಂದಿರುಗಿದ್ದಳು. ಈ ವೇಳೆ ಜುಲೈ 08ರಂದು ಮಧ್ಯಾಹ್ನ ಸ್ನೇಹಿತೆಯ ಮನೆಯಲ್ಲಿ ಇದ್ದಾಗ, ಕಲ್ಲಾಜೆ ದೇವನಹಳ್ಳಿ ನಿವಾಸಿ ಮೋಕ್ಷಿತ್ ಎಂಬಾತ ಮನೆ ಸಮೀಪಕ್ಕೆ ಕರೆದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದು, ವಿಷಯವನ್ನು ಯಾರಿಗೂ ತಿಳಿಸದಂತೆ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ(BNS) ಕಲಂ 65(1), 35(2) ಹಾಗೂ ಪೊಕ್ಸೊ(POCSO) ಕಾಯ್ದೆಯ ಕಲಂ 4ರಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading