ಸುಳ್ಯ: ಎನ್.ಎಂ.ಪಿ.ಯು.ಸಿಯಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ, ಕನ್ನಡ ಸಂಘ ನೆಹರು ಮೆಮೋರಿಯಲ್ ಪಿಯು ಕಾಲೇಜು ಸುಳ್ಯ ಇದರ ವತಿಯಿಂದ ಶ್ರೀ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಿ ಯ.ವಿ.ಜಿ ಯವರ ಮಂಕುತಿಮ್ಮನ ಕಗ್ಗದ ವಿವರಣೆ ಮತ್ತು ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ವಹಿಸಿದ್ದರು. ಪದವಿ ವಿಭಾಗದ ಪ್ರಾಚಾರ್ಯರಾದ ಡಾ. ರುದ್ರ ಕುಮಾರ್ ಎಂ.ಎಂ ಉದ್ಘಾಟಿಸಿದರು. ಮಂಕುತಿಮ್ಮನ ಕಗ್ಗದ ವಿವರಣೆಯನ್ನು ಖ್ಯಾತ ಯಕ್ಷಗಾನ ಅರ್ಥಧಾರಿ ವೆಂಕಟ್ರಾಮ ಭಟ್, ಗಾಯನವನ್ನು ರಚನಾ ಚಿದ್ಗಲ್ ನಡೆಸಿಕೊಟ್ಟರು.

. . . . . . . . .

ಮುಖ್ಯ ಅತಿಥಿಗಳಾಗಿ ಆಡಳಿತ ಮಂಡಳಿ ಕಾರ್ಯದರ್ಶಿ ಹೇಮನಾಥ್ ಕೆ.ವಿ, ಪಿ.ಯು ವಿಭಾಗದ ಪ್ರಾಚಾರ್ಯರಾದ ಮಿಥಾಲಿ.ಪಿ ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ.ಎಂ ಹಾಗೂ ಕ.ಸಾ.ಪ ಸುಳ್ಯ ಘಟಕದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

. . . . . . .

ವಿದ್ಯಾರ್ಥಿನಿ ಪವನಿ ಮತ್ತು ಬಳಗದವರು ಪ್ರಾರ್ಥಿಸಿದರು. ಪ್ರಾಚಾರ್ಯರಾದ ಮಿಥಾಲಿ ಪಿ ರೈ ಸ್ವಾಗತಿಸಿ, ಉಪನ್ಯಾಸಕಿಯರಾದ ಸಾವಿತ್ರಿ.ಕೆ, ಪ್ರೇಮಲತ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ.ಎಂ ವಂದಿಸಿದರು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ ನಿರೂಪಿಸಿದರು. ಸಾಹಿತ್ಯಾಭಿಮಾನಿಗಳು, ಪದವಿ, ಪ.ಪೂ ವಿಭಾಗದ ಉಪನ್ಯಾಸಕರು, ಪಿಯು ವಿದ್ಯಾರ್ಥಿಗಳು ಭಾಗವಹಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading