ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪ್ರದಾನ ಮಂತ್ರಿ ನರೇಂದ್ರ ಮೋದಿ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ – ತಹಶೀಲ್ದಾರ್ ಗೆ ಮನವಿ

ದೆಹಲಿಯಲ್ಲಿ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ಬೆಂಬಲ ಸೂಚಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಲೋಕಸಭಾ ಸದಸ್ಯೆ ಶ್ರೀಮತಿ ಪ್ರಿಯಾಂಕಾ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರನ್ನು ಅಕ್ರಮವಾಗಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಸಡೆಸಿ ಬಳಿಕ ಸುಳ್ಯ ತಹಶೀಲ್ದಾರ್ ಮಂಜುಳ ಅವರಿಗೆ ಮನವಿ ಸಲ್ಲಿಸಿದರು.‌

. . . . . . . . .

“ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವುದು ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದೆ. ವಿದ್ಯಾರ್ಥಿಗಳ ಧ್ವನಿಗೆ ಬೆಂಬಲವಾಗಿ ನಡೆದ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕುವ ಉದ್ದೇಶದಿಂದ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನೇರ ದಾಳಿಯಾಗಿದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಹಂತಗಳ ಮುಖಂಡರು, ಪದಾಧಿಕಾರಿಗಳು, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅನೇಕ ಪ್ರಮುಖ ನಾಯಕರು ಭಾಗವಹಿಸಿ, ಕೇಂದ್ರ ಸರ್ಕಾರದ ದಮನಕಾರಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ತೀವ್ರವಾಗಿ ಖಂಡಿಸಿರುತ್ತಾರೆ. ಭಿನ್ನಾಭಿಪ್ರಾಯಗಳನ್ನು ಬಂಧನ ಮತ್ತು ಬೆದರಿಕೆಗಳ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆ, ಸಂವಿಧಾನದ ಮೌಲ್ಯಗಳ ಉಳಿವು ಹಾಗೂ ಪ್ರಜಾಪ್ರಭುತ್ವದ ಪರ ಕಾಂಗ್ರೆಸ್ ಪಕ್ಷ ತನ್ನ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದೆ. ಸದ್ರಿ ನೀಟ್ ಪರೀಕ್ಷೆಯ ಪ್ರಶ್ನಾ ಪತ್ರಿಕೆ ಸೊರಿಕೆಗೆ ಕಾರಣರಾದವರನ್ನು, ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಮತ್ತು ದೇಶದ ಈ ಎಲ್ಲಾ ಅರಾಜಕತೆಗೆ ಕಾರಣರಾಗಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿಯವರು ನೇರ ಹೊಣೆಯನ್ನು ಹೊತ್ತು ರಾಜಿನಾಮೆ ನೀಡಬೇಕು” ಎಂದು ಮನವಿಯಲ್ಲಿ ತಿಳಿಸಿದೆ.

. . . . . . .

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು, ಕಾಯರ್ತೋಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಧಾರ್ಮಿಕ ಪರಿಷತ್ ಜಲ್ಲಾ ಸದಸ್ಯ ಲಕ್ಷ್ಮೀಶ ಗಬ್ಲಡ್ಕ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ , ನಗರ ಪಂಚಾಯತ್ ಮಾಜಿ ಸದಸ್ಯ ಶರೀಫ್ ಕಂಠಿ, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ರಾಜೀವಿ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೊಲ್ಚಾರ್, ಪಿ. ಎಸ್.ಗಂಗಾಧರ, ಧನುಷ್ ಕುಕ್ಕೆಟ್ಟಿ, ಮಹೇಶ್ ಬೆಳ್ಳಾರ್ಕರ್, ನಂದರಾಜ‌ ಸಂಕೇಶ, ಶ್ರೀಹರಿ ಕುಕ್ಕುಡೇಲು, ರಾಜು ಪಂಡಿತ್, ಸತ್ಯಕುಮಾರ್ ಆಡಿಂಜ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading