ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ | ರಾಹುಲ್ ಗಾಂಧಿಗೆ ಅವಮಾನ; ಸಂಪಾಜೆ ವಲಯ ಕಾಂಗ್ರೆಸ್ ಖಂಡನೆ

ಸುಳ್ಯ, ಜು.22: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಬೆಂಬಲ ಸೂಚಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಆಡಳಿತ ಪಕ್ಷದವರು ಅವಮಾನಕಾರಿಯಾಗಿ ನಡೆದುಕೊಂಡಿರುವುದನ್ನು ಸಂಪಾಜೆ ವಲಯ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಕೆ.ಪಿ. ಜಾನಿ ಹೇಳಿದರು.

. . . . . . . . .

ಸುಳ್ಯದ ಪತ್ರಿಕಾಭವನದಲ್ಲಿ ಜು. 22ರಂದು ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಬೆಂಬಲವಾಗಿ ರಾಹುಲ್ ಗಾಂಧಿ ನಿಂತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದರು.

. . . . . . .

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮತ್ತು ಅಯೋಧ್ಯೆ ರಾಮಮಂದಿರಕ್ಕೆ ಸಂಬಂಧಿಸಿದ ಆರ್ಥಿಕ ಅಕ್ರಮಗಳ ಕುರಿತು ಪ್ರತಿಕ್ರಿಯಿಸಿದ ಅವರು, ರಾಮಮಂದಿರದಲ್ಲಿ ನಡೆದಿರುವುದಾಗಿ ಆರೋಪಿಸಲಾಗುತ್ತಿರುವ ಖಜಾನೆ ಲೂಟಿ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಬೆಳವಣಿಗೆಗಳಿಂದ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದ ಅವರು, ಈ ಕುರಿತು ಬಿಜೆಪಿ ಮೌನ ವಹಿಸಿರುವುದು ವಿಷಾದನೀಯ. ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಕನಿಷ್ಠ ಸೌಜನ್ಯವನ್ನೂ ಕೇಂದ್ರ ಸರ್ಕಾರ ತೋರಿಸಿಲ್ಲ ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ವಸಂತ ಪೆಲ್ತಡ್ಕ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕ, ಪ್ರಧಾನ ಕಾರ್ಯದರ್ಶಿ ಲೂಕಾಸ್ ಟಿ.ಐ., ಜ್ಞಾನಶೀಲನ್ ನೆಲ್ಲಿಕುಮೇರಿ, ಮಹಿಳಾ ಸಮಿತಿ ಅಧ್ಯಕ್ಷೆ ಲಲನ ಕೆ.ಆರ್. ಹಾಗೂ ಉಪಾಧ್ಯಕ್ಷೆ ಪ್ರಮೀಳ ಪೆಲ್ತಡ್ಕ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading