ಸರಕಾರಿ ಪ್ರೌಢಶಾಲೆ ಎಣ್ಮೂರಿನಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕ್ಷಯ ಮುಕ್ತ ಭಾರತ ಮತ್ತು ವ್ಯಸನ ಮುಕ್ತ ಭಾರತ ಎಂಬ ಧ್ಯೇಯ ವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ನಡೆದ ಮಾಹಿತಿ ಕಾರ್ಯಾಗಾರವನ್ನು ಶಾಲಾ ಮುಖ್ಯ ಶಿಕ್ಷಕರಾದ ಟೈಟಸ್ ವರ್ಗಿಸ್ ಉದ್ಘಾಟಿಸಿ ಶುಭ ಹಾರೈಸಿದರು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾಧ್ಯಕ್ಷರು ಹಾಗೂ ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ನಿರ್ದೇಶಕರಾದ ಈಶ್ವರ ವಾರಾಣಸಿ ವಹಿಸಿದ್ದು ಇಂದಿನ ಮಕ್ಕಳು ಭಾವಿ ಪ್ರಜೆಗಳು, ತಾವು ವೈಯಕ್ತಿಕ ಶಿಸ್ತಿನೊಂದಿಗೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ತಿಳಿಸಿದರು.

. . . . . . .

ವೇದಿಕೆಯಲ್ಲಿ ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ಖಜಾಂಚಿ, ಯುವ ನ್ಯಾಯವಾದಿ ಶ್ರೀಮತಿ ಭಾರತಿ.ಕೆ.ಪಿ, ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಮೋಹಿನಿ, ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ.ಉಪಸ್ಥಿತರಿದ್ದು, ಶುಭ ಹಾರೈಸಿದರು.

ಬಳಿಕ ನಡೆದ ತರಬೇತಿಯಲ್ಲಿ ಜಿಲ್ಲಾ ಕ್ಷಯ ಚಿಕಿತ್ಸಾ ಕೇಂದ್ರ ಮಂಗಳೂರು ಇದರ ಪಿಪಿಎಂ ಸಂಯೋಜಕರಾದ ಮನೋಜ್ ಕೋಡಿಕಲ್ ಮತ್ತು ಕ್ಷಯ ಚಿಕಿತ್ಸಾ ಕೇಂದ್ರ ಸುಳ್ಯ ಇದರ ಹಿರಿಯ ಚಿಕಿತ್ಸಾ ಮೇಲ್ವಿಚಾರಕರಾದ ಲೋಕೇಶ್ ತಂಟೆಪ್ಪಾಡಿ ರವರು ಕ್ಷಯ ರೋಗದ ಲಕ್ಷಣಗಳು, ತಡೆಗಟ್ಟುವಿಕೆ ಮತ್ತು ಚಿಕಿತ್ಸಾ ಕ್ರಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಮಾದಕ ವಸ್ತುಗಳನ್ನು ಬಳಸುವುದರಿಂದ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಗೆ ಬಲಿಯಾಗುವ ಸಾಧ್ಯತೆ ಹಾಗೂ ವೈಯಕ್ತಿಕ ಆರೋಗ್ಯ ಕೆಡುತ್ತದೆ ಎಂದು ಎಚ್ಚರಿಕೆ ನೀಡಿದರು. ಶಾಲಾ ಗಣಿತ ಶಿಕ್ಷಕರಾದ ಸಂತೋಷ್ ಅತಿಥಿಗಳನ್ನು ಸ್ವಾಗತಿಸಿದರು. ಆಂಗ್ಲ ಭಾಷಾ ಶಿಕ್ಷಕರಾದ ಶ್ರೀ ಲಿಂಗಪ್ಪ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading