ಗೌಡ ಮಹಿಳಾ ಘಟಕದ ಸಮಾಜಮುಖಿ ಸೇವೆ: ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಗೌಡರ ಯುವ ಸೇವಾ ಸಂಘ ಹಾಗೂ ಮಹಿಳಾ ಘಟಕ

. . . . . . . . .

ಸುಳ್ಯ: ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ ಹಾಗೂ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಮಹಿಳಾ ಘಟಕದ ಎರಡನೇ ವರ್ಷದ ಸಂಭ್ರಮದ ಅಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು.

. . . . . . .

ಈ ಸಂದರ್ಭದಲ್ಲಿ ಮಾತನಾಡಿದ ಲತಾಶ್ರೀ ಸುಪ್ರೀತ್ ಮೊಂಟಡ್ಕ, “ಕಷ್ಟದಲ್ಲಿರುವ ವ್ಯಕ್ತಿಯ ನೋವನ್ನು ಸಂಪೂರ್ಣವಾಗಿ ಪರಿಹರಿಸಲು ಸಾಧ್ಯವಾಗದಿದ್ದರೂ, ಅವರ ನೋವಿನೊಂದಿಗೆ ನಿಲ್ಲುವುದು ನಿಜವಾದ ಮಾನವೀಯತೆ” ಎಂದು ಹೇಳಿದರು. ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜಿಸಿರುವ ಗೌಡರ ಯುವ ಸೇವಾ ಸಂಘ ಹಾಗೂ ಮಹಿಳಾ ಘಟಕದ ಕಾರ್ಯವನ್ನು ಅವರು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು ವಹಿಸಿದ್ದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ, ಸುಳ್ಯ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ನವೀನ್ ಎನ್.ಎಸ್. ಹಾಗೂ ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೊಂಟಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಮಹಿಳಾ ಘಟಕದ ಕಾರ್ಯದರ್ಶಿ ಸವಿತಾ ಸಂದೇಶ್ ಕಾರ್ಯಕ್ರಮ ನಿರೂಪಿಸಿ, ಕೋಶಾಧಿಕಾರಿ ತಾರಾ ಮಾಧವ ಬೆಳ್ಳಾರೆ ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಆಸ್ಪತ್ರೆಯ ಎಲ್ಲಾ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗೌಡ ನಗರ ಸಮಿತಿಯ ಅಧ್ಯಕ್ಷ ಕುಂಟಿಕಾನ, ಗೌಡರ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ, ನಿರ್ದೇಶಕ ಹರಿಶ್ಚಂದ್ರ ಪಾತಿಕಲ್ಲು, ಸುಪ್ರೀತ್ ಮೊಂಟಡ್ಕ, ಜನಾರ್ದನ ಕೊಳಂಜಿರೋಡಿ, ಮಂಜುನಾಥ್ ಮಡ್ತಿಲ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading