ಸುಳ್ಯ: ಅರಂತೋಡಿನಲ್ಲಿ ಆ. 4ರಂದು ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್‌ನ ಸಂಯುಕ್ತ ಖಾಝಿ ಅಧಿಕಾರ ಸ್ವೀಕಾರ ಸಮಾರಂಭ

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ (ರಿ.) ಅಧೀನದಲ್ಲಿರುವ ಸುಮಾರು 14 ಜಮಾಅತ್‌ಗಳ ಸಂಯುಕ್ತ ಖಾಝಿಯಾಗಿ ಸಮಸ್ತ ಕೇರಳ ಜಮ್ಇಯ್ಯತುಲ್ ಉಲಮಾ ಅಧ್ಯಕ್ಷ ಬಹು. ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಘಳ್ ಅವರನ್ನು ನೇಮಕ ಮಾಡಲಾಗಿದ್ದು, ಅವರ ಖಾಝಿ ಅಧಿಕಾರ ಸ್ವೀಕಾರ ಸಮಾರಂಭವು ಆ. 4ರಂದು ಅರಂತೋಡು ತೆಕ್ಕಿಲ್ ಎನ್.ಪಿ.ಎಂ. ಝೈನುಲ್ ಅಬಿದೀನ್ ತಂಘಳ್ ದುಗ್ಗಲಡ್ಕದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ತಿಳಿಸಿದರು.
ಸುಳ್ಯದ ಪತ್ರಿಕಾಭವನದಲ್ಲಿ ಆ.1 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಮಾರಂಭವನ್ನು ಬಹು. ಎನ್.ಪಿ.ಎಂ. ಝೈನುಲ್ ಅಬಿದೀನ್ ತಂಘಳ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ ಖಾದರ್ ಬಾಯಂಬಾಡಿ ವಹಿಸಲಿದ್ದಾರೆ ಎಂದರು.
ಮುಖ್ಯ ಪ್ರಭಾಷಣಕಾರರಾಗಿ ಖ್ಯಾತ ವಾಗ್ಮಿ ಅಬ್ದುಲ್ ಸಲಾಂ ಬಾಖವಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ಅಸ್ಸಯ್ಯದ್ ಪೂಕೋಯ ತಂಘಳ್ (ಪುತ್ತೂರು), ಶೈಖುನಾ ಎಂ.ಟಿ. ಅಬ್ದುಲ್ಲ ಮುಸ್ಲಿಯಾರ್, ಕೆ.ಎ. ಉಮ್ಮರ್ ಮುಸ್ಲಿಯಾರ್, ಉಮ್ಮರ್ ಪ್ರೈಝಿ ಮುಕಂ, ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲ ಫೈಝಿ ಮಕಂ, ಮುಶಾವರ ಸದಸ್ಯ ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನ್ ಫೈಝಿ ತೊಡಾರ್, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತಕ್ಕಿಲ್ ಸೇರಿದಂತೆ ಅನೇಕ ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

. . . . . . . . .

ತಾಲೂಕಿನ 14 ಜಮಾಅತ್‌ಗಳ ಸದಸ್ಯರು ಹಾಗೂ ಸಮಸ್ತಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ಮಂದಿ ಉಪಸ್ಥಿತರಿರುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

. . . . . . .

ಸುದ್ದಿಗೋಷ್ಠಿಯಲ್ಲಿ ಸಂಯುಕ್ತ ಜಮಾಅತ್ ಕೋಶಾಧಿಕಾರಿ ಹಮೀದ್ ಹಾಜಿ, ಉಪಾಧ್ಯಕ್ಷ ಹಾಜಿ ಇಬ್ರಾಹಿಂ ಕತ್ತರ್, ಸಂಘಟನಾ ಕಾರ್ಯದರ್ಶಿ ಜಮಾಲ್ ಬೆಳ್ಳಾರೆ, ಸುಳ್ಯ ತಾಲೂಕು ಮದ್ರಸಾ ಮೆನೇಜ್‌ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಸಂಪಾಜೆ, ಕಾರ್ಯದರ್ಶಿ ಯು.ಪಿ. ಬಶೀರ್ ಬೆಳ್ಳಾರೆ, ಎಸ್‌.ಕೆ.ಎಸ್‌.ಎಸ್‌.ಎಫ್‌. ವಲಯಾಧ್ಯಕ್ಷ ಅಬೂಬಕ್ಕರ್ ಪೂಪಿ, ಅರಂತೋಡು ಜಮಾಅತ್‌ ಕಾರ್ಯದರ್ಶಿ ಅಬೂಬಕ್ಕರ್ ಪಾರೆಕ್ಕಲ್, ಅನ್ವರುಲ್‌ಹುದಾ ಯಂಗ್‌ಮೆನ್ಸ್ ಅಸೋಸಿಯೇಷನ್‌ ಅಧ್ಯಕ್ಷ ಅಮೀ‌ರ್ ಕುಕ್ಕುಂಬಳ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading