ಗ್ರಾಮ ಆಡಳಿತಾಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ – ಆ.9ರಂದು ಉಚಿತ ತರಬೇತಿ

ಸುಳ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ತಾಂತ್ರಿಕ ಕಾರಣಗಳಿಂದ ವಿಸ್ತರಿಸಿದೆ. ಈ ಮೊದಲು ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಇದೀಗ ಆಗಸ್ಟ್ 7, 2026ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

. . . . . . . . .

ಒಟ್ಟು 572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ದ್ವಿತೀಯ ಪಿಯುಸಿ ಉತ್ತೀರ್ಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷವಾಗಿದ್ದು, ಸಾಮಾನ್ಯ ವರ್ಗದವರಿಗೆ ಗರಿಷ್ಠ 40 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 43 ವರ್ಷ ಹಾಗೂ ಎಸ್‌ಸಿ, ಎಸ್‌ಟಿ ಮತ್ತು ವರ್ಗ–1 ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

. . . . . . .

ಅರ್ಜಿ ಸಲ್ಲಿಸಲು ಫೋಟೋ, ಶೈಕ್ಷಣಿಕ ಅಂಕಪಟ್ಟಿಗಳು, ಆಧಾರ್ ಕಾರ್ಡ್, ಮೀಸಲಾತಿಗೆ ಸಂಬಂಧಿಸಿದ ಜಾತಿ ಪ್ರಮಾಣಪತ್ರ, ಕನ್ನಡ ಮಾಧ್ಯಮ ಹಾಗೂ ಗ್ರಾಮೀಣ ಅಭ್ಯರ್ಥಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಇದೇ ವೇಳೆ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿ ವತಿಯಿಂದ ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ಆಗಸ್ಟ್ 9ರಂದು ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ತರಬೇತಿಯಲ್ಲಿ VAO ಪರೀಕ್ಷೆಯ ಮಾದರಿ, ತಯಾರಿ ವಿಧಾನಗಳು ಹಾಗೂ ಇತರೆ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ ನೀಡಲಾಗುವುದು.

ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಹಾಗೂ ಸರ್ಕಾರಿ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲರೂ ಈ ಉಚಿತ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಅಕಾಡೆಮಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 94485 27606 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading