ಮಳೆಯ ಹಿನ್ನೆಲೆ ನಾಳೆ(ಆ.04) ದ.ಕ ಜಿಲ್ಲೆಯ ಮಂಗಳೂರು ಹಾಗೂ ಪುತ್ತೂರು ಉಪವಿಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ; ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿದ ಜಿಲ್ಲಾಧಿಕಾರಿಗಳು

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ(ಆ.04) ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ, ಉಳ್ಳಾಲದ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು 10ನೇ ತರಗತಿಯ ವರೆಗೆ(ಎಲ್ಲಾ ವಸತಿ ಶಾಲೆಗಳು ಸೇರಿದಂತೆ)‌ ಹಾಗೂ ಪುತ್ತೂರು ವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ, ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜು, ಎಲ್ಲಾ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ 12ನೇ ತರಗತಿಯವರೆಗೆ(ಎಲ್ಲಾ ವಸತಿ ಶಾಲೆಗಳು ಸೇರಿದಂತೆ) ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading