ಇಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ ಬಿಎಂಎಸ್ ಮನವಿ

ಸುಳ್ಯ: ಭಾರತೀಯ ಮಜ್ದೂರ್ ಸಂಘದ ಆಟೋ ಚಾಲಕರ ಘಟಕದ ವತಿಯಿಂದ ಸುಳ್ಯ ನಗರದಲ್ಲಿ ಇಲೆಕ್ಟ್ರಿಕ್ ವಾಹನಗಳಿಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ಸ್ಥಳೀಯ ಶಾಸಕರು ಹಾಗೂ ಮೆಸ್ಕಾಂ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಆ. 4ರಂದು ಮನವಿ ಸಲ್ಲಿಸಲಾಯಿತು.

. . . . . . . . .

ಸುಳ್ಯ ನಗರದಲ್ಲಿ ಇಲೆಕ್ಟ್ರಿಕ್ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ವಾಹನ ಚಾಲಕರ ಅನುಕೂಲಕ್ಕಾಗಿ ಸೂಕ್ತ ಸ್ಥಳಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಇದರಿಂದ ಪರಿಸರ ಸ್ನೇಹಿ ವಾಹನಗಳ ಬಳಕೆಗೂ ಉತ್ತೇಜನ ದೊರೆಯಲಿದ್ದು, ವಾಹನ ಸವಾರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಭಾರತೀಯ ಮಜ್ದೂರ್ ಸಂಘದ ಆಟೋ ಚಾಲಕರ ಘಟಕದ ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ., ಕೋಶಾಧಿಕಾರಿ ರವಿ ಎಸ್., ಸಂಘಟನಾ ಕಾರ್ಯದರ್ಶಿ ಸುಂದರ್ ಪೆರಾಜೆ, ಜಂಟಿ ಕಾರ್ಯದರ್ಶಿ ಸುರೇಂದ್ರ ಕಾಮತ್ ಹಾಗೂ ನಿರ್ದೇಶಕರಾದ ಭಾನು ಪ್ರಕಾಶ್ ಮತ್ತು ಹರೀಶ್ ನೆಕ್ರಾಜೆ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading