ಕೊಲ್ಲಮೊಗ್ರು : ಆ.08ರಂದು “ಆಟಿದ ಕೂಟ-2026” ಕಾರ್ಯಕ್ರಮ ; ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

ಆಟಿ ತಿಂಗಳ ವಿಶೇಷತೆಯನ್ನು ಪರಿಚಯಿಸುವ ಹಾಗೂ ತುಳುನಾಡಿನ ಆಚರಣೆ, ಆಹಾರ ಪದ್ಧತಿ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ಚೈತನ್ಯ ಯುವತಿ ಮಂಡಲ(ರಿ.) ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ(ರಿ.) ಕೊಲ್ಲಮೊಗ್ರು ಹಾಗೂ ಕೆವಿಜಿ ಪ್ರೌಢಶಾಲೆ ಕೊಲ್ಲಮೊಗ್ರು ಇವುಗಳ ಸಂಯುಕ್ತಾಶ್ರಯದಲ್ಲಿ ಆ.08 ಶನಿವಾರದಂದು ಕೊಲ್ಲಮೊಗ್ರದ ಕೆವಿಜಿ ಪ್ರೌಢಶಾಲೆ ವಠಾರದಲ್ಲಿ ಬೆಳಿಗ್ಗೆ 9:30ರಿಂದ “ಆಟಿದ ಕೂಟ-2026” ಕಾರ್ಯಕ್ರಮ ನಡೆಯಲಿದ್ದು, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ಪವನ್ ಪಲ್ಲತ್ತಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೆವಿಜಿ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬೊಳಿಯಪ್ಪ ಗೌಡ ಪೈಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ಕೆವಿಜಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕಮಲಾಕ್ಷ ಗೌಡ ಮುಳ್ಳುಬಾಗಿಲು, ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರಾದ ದಿನೇಶ್ ಹಾಲೆಮಜಲು, ಕೆವಿಜಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್ ಮೂಕಮಲೆ, ಮಹಾತ್ಮ ಯುವಕ ಮಂಡಲದ ಅಧ್ಯಕ್ಷರಾದ ಮಿಥುನ್ ಪೈಲೂರು ಹಾಗೂ ಚೈತನ್ಯ ಯುವತಿ ಮಂಡಲದ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಭಟ್ ಎನ್.ಜಿ ಉಪಸ್ಥಿತರಿರಲಿದ್ದಾರೆ.
ಉದ್ಘಾಟನಾ ಸಮಾರಂಭದ ನಂತರ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, 8ನೇ ತರಗತಿ ವಿದ್ಯಾರ್ಥಿಗಳಿಗೆ ಚೆನ್ನೆಮಣೆ ಸ್ಪರ್ಧೆ, 9ನೇ ತರಗತಿ ವಿದ್ಯಾರ್ಥಿಗಳಿಗೆ “ಆಟಿ ದಿನಗಳು ಹಿಂದೆ, ಇಂದು ಮತ್ತು ಮುಂದೆ” ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆ, 10ನೇ ತರಗತಿ ವಿದ್ಯಾರ್ಥಿಗಳಿಗೆ ಪತ್ರೊಡೆ ತಯಾರಿ ಮತ್ತು ಪ್ರದರ್ಶನ, ಸಾರ್ವಜನಿಕ ಮಹಿಳೆಯರಿಗೆ ಆಟಿ ದಿನಗಳ ಖಾದ್ಯ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ತುಳು ಪಾಡ್ದನ ಸ್ಪರ್ಧೆ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading