ಕಾವು ನವೋದಯ ಒಕ್ಕೂಟದಿಂದ ಮಕ್ಕಳಿಗೆ ಪುಸ್ತಕ-ಲೇಖನ ಸಾಮಗ್ರಿ ಮತ್ತು ಪ್ರೋತ್ಸಾಹ ಧನ ವಿತರಣೆ

ಕಾವು, ಆಗಸ್ಟ್ 4 : ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ. ಮಂಗಳೂರು ಮತ್ತು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಕಾವು ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಲೇಖನ ಸಾಮಗ್ರಿ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮವು ಸೋಮವಾರ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ ನಡೆಯಿತು.

. . . . . . . . .

ಕಾರ್ಯಕ್ರಮದಲ್ಲಿ ಒಕ್ಕೂಟದ ಸದಸ್ಯರ ಒಟ್ಟು 95 ಮಕ್ಕಳಿಗೆ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು. ಅದೇ ವೇಳೆ ಕಳೆದ ಬಾರಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 4 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.

. . . . . . .

ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನನ್ಯ ಅಚ್ಚುತ್ತ ಮೂಡೆತ್ತಾಯ ಅವರು ದೀಪ ಪ್ರಜ್ವಲಿಸಿ ಮಾತನಾಡಿ, “ಒಂದು ನಿಯಮವನ್ನು ಎಲ್ಲರೂ ಶಿಸ್ತುಬದ್ಧವಾಗಿ ಪಾಲಿಸಿದಾಗ ಮಾತ್ರ ವ್ಯಕ್ತಿಯಾಗಲಿ ಅಥವಾ ಸಂಘಟನೆಯಾಗಲಿ ಉನ್ನತಿಗೆ ಏರಲು ಸಾಧ್ಯ. ಕಳೆದ ಹತ್ತು ವರ್ಷಗಳಿಂದ ಒಕ್ಕೂಟವು ಅಚ್ಚುಕಟ್ಟಾಗಿ ನಡೆಸಿಕೊಂಡು ಬರುತ್ತಿರುವ ಸೇವಾ ಕಾರ್ಯಗಳು ಎಲ್ಲರಿಗೂ ಮಾದರಿಯಾಗಿವೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಿಎ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೇಶವ ಮೂರ್ತಿ, ಟ್ರಸ್ಟ್ ನ ಮೇಲ್ವಿಚಾರಕರಾದ ಹರೀಶ್ ಕುಲಾಲ್, ಒಕ್ಕೂಟದ ಅಧ್ಯಕ್ಷರಾದ ಸುಬ್ರಾಯ ಗೌಡ, ಗೌರವಾಧ್ಯಕ್ಷ ಅಮ್ಮುಪೂಂಜಾ, ಕಾವು ವಲಯ ಪ್ರೇರಕರಾದ ಗಾಯತ್ರಿ, ನೂತನ ಒಕ್ಕೂಟದ ಕಾರ್ಯದರ್ಶಿ ರೇವತಿ ಸಿ.ಎನ್, ಜೊತೆ ಕಾರ್ಯದರ್ಶಿ ಮೀನಾಕ್ಷಿ ಎಂ ಉಪಸ್ಥಿತರಿದ್ದರು.

ರೇವತಿ ಸಿ.ಎನ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸುಬ್ರಾಯ ಗೌಡ ಸ್ವಾಗತಿಸಿದರು. ಗೌರವಾಧ್ಯಕ್ಷರಾದ ಅಮ್ಮುಪೂಂಜಾ ಪ್ರಾಸ್ತಾವಿಕವಾಗಿ ಮಾತನಾಡಿದರು. ನೂತನ ಜೊತೆ ಕಾರ್ಯದರ್ಶಿ ಮೀನಾಕ್ಷಿ ಎಂ ಒಕ್ಕೂಟದ ವರದಿ ಓದಿದರು.

ಶ್ರೀ ಪಂಚಲಿಂಗೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕ ಶ್ರೇಯಸ್ ಸಿ ಎನ್ ಧನ್ಯವಾದ ನೆರವೇರಿಸಿದ ಈ ಕಾರ್ಯಕ್ರಮವನ್ನು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಚಿದಾನಂದ ಆಚಾರ್ಯ ನಿರ್ವಹಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading