- Sunday
- September 20th, 2026
ಸುಳ್ಯ : ಇರುವಂಬಳ್ಳ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಕಾಲುಸಂಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಸುಳ್ಯ ತಾಲೂಕು ಸದಸ್ಯ ಅಬ್ಬಾಸ್ ಎ.ಬಿ. ಮನವಿ ಸಲ್ಲಿಸಿದರು. ಸುಮಾರು ಹಲವು ವರ್ಷಗಳಿಂದ ಇರುವಂಬಳ್ಳ ಪ್ರದೇಶದಲ್ಲಿ ಸುಮಾರು 500 ರಷ್ಟು ಮನೆಗಳಿದ್ದು, ಶಾಲಾ ಮಕ್ಕಳು ಹಾಗೂ...
ಪ್ರಾಕೃತಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಅಧಿಕಾರಿಗಳು ಕೇವಲ ಮನಸ್ಸಿನಿಂದಲ್ಲ, ಹೃದಯದಿಂದ ಕೆಲಸ ಮಾಡಬೇಕು. ಆಗ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ. 6ರಂದು ಸುಳ್ಯ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಾಕೃತಿಕ ವಿಕೋಪ ಮುಂಜಾಗೃತಾ...
ಸುಬ್ರಹ್ಮಣ್ಯ : ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ಸುಬ್ರಹ್ಮಣ್ಯದಲ್ಲಿ ನಡೆಯುವ 22ನೇ ವರ್ಷದ ಕೃಷ್ಣಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ.ಕಾರ್ಯದರ್ಶಿಯಾಗಿ ಉದ್ಯಮಿ ಜಯರಾಮ ಎಚ್.ಎಲ್ ಆಯ್ಕೆಯಾಗಿದ್ದಾರೆ. ಸ್ಥಾಪಕಾಧ್ಯಕ್ಷರಾದ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ...
ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ, ಸುಳ್ಯದ ಕೆವಿಜಿ ಐಪಿಎಸ್, ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿರುವ ಕು. ಶ್ರೇಯಾ ಬೊಮ್ಮೆಟ್ಟಿ ಅವರು ರಾಷ್ಟ್ರಮಟ್ಟದಲ್ಲಿ ತಮ್ಮ ಅಸಾಧಾರಣ ಪ್ರತಿಭೆಯನ್ನು ಸಾಬೀತುಪಡಿಸಿ, ಭಾರತೀಯ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ (Indian Institute of Science Education and Research – IISER),...
ಬೆಳ್ಳಾರೆ: ಗ್ರಾಮದ ನೆಟ್ಟಾರು–ಇಂದಿರಾನಗರ–ದೇವರಗುಂಡಿ ಸಂಪರ್ಕ ರಸ್ತೆಯು ದಶಕಗಳು ಕಳೆದರೂ ಡಾಮರೀಕರಣದ ಭಾಗ್ಯ ಕಾಣದೆ ಶೋಚನೀಯ ಸ್ಥಿತಿಯಲ್ಲಿದೆ. ಸ್ಥಳೀಯಾಡಳಿತ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಳೆಗಾಲದಲ್ಲಿ ಕೆಸರು ಮತ್ತು ಗುಂಡಿಗಳಿಂದ ಕಂಬಳದ ಕೆರೆಯಂತಾಗುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸುಮಾರು ಒಂದೂವರೆ ಕಿ.ಮೀ. ಉದ್ದದ ಈ ರಸ್ತೆಯಲ್ಲಿ ನಡೆದು ಸಂಚರಿಸುವುದೇ ಕಷ್ಟಕರವಾಗಿದ್ದು, ವಾಹನ ಸಂಚಾರವೂ ದುಸ್ತರವಾಗಿದೆ....
ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಡಮಂಗಲ-ಪುಳಿಕುಕ್ಕು ರಸ್ತೆಯನ್ನು ₹4 ಕೋಟಿ, ಮರ್ಕಂಜ-ಎಲಿಮಲೆ ರಸ್ತೆಯನ್ನು ₹5 ಕೋಟಿ ಹಾಗೂ ಐವರ್ನಾಡು-ದರ್ಖಾಸು ರಸ್ತೆಯನ್ನು ₹3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವಂತೆ ಒಟ್ಟು ₹12 ಕೋಟಿ ಮೊತ್ತದ ಪ್ರಸ್ತಾವನೆಯನ್ನು ಲೋಕೋಪಯೋಗಿ ಇಲಾಖೆಗೆ ಶಾಸಕಿ ಭಾಗೀರಥಿ ಸಲ್ಲಿಸಿದ್ದರು. ಈ ಪ್ರಸ್ತಾವನೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಅನುಮೋದನೆಗೊಂಡಿದ್ದು, ರಸ್ತೆಗಳ ಸಮಗ್ರ ಯೋಜನಾ ವರದಿ(DPR)...
ಸುಳ್ಯ ನಗರ ಪಂಚಾಯತ್ ಮುಂಭಾಗದ ಶೆಡ್‌ನಲ್ಲಿ ಹಲವು ವರ್ಷಗಳಿಂದ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸಿ, ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಡ್ಕ ಆರೋಗ್ಯ ಸಚಿವ ಯು.ಟಿ ಖಾದರ್ ರವರಿಗೆ ಇಂದು ಮನವಿ ಸಲ್ಲಿಸಿದ್ದಾರೆ. ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಗೆ ಇಂದು ಸುಳ್ಯಕ್ಕೆ ಆಗಮಿಸಿದ ವೇಳೆ ಸುಪ್ರೀತ್ ರವರು ಸಚಿವರಿಗೆ ಈ...
ಸುಳ್ಯ: ಕ್ಯಾನ್ಸರ್ ಬಗ್ಗೆ ಮುಂಚಿತವಾಗಿ ಅರಿವು ಮೂಡಿಸುವುದೇ ಇದನ್ನು ತಡೆಗಟ್ಟುವ ಏಕೈಕ ಮಾರ್ಗ. ಇಂತಹ ಅಭಿಯಾನಗಳು ಪ್ರತಿ ಮನೆಗೂ ತಲುಪಬೇಕು" ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಅಭಿಪ್ರಾಯಪಟ್ಟರು.ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ರೋಟರಿ ಕ್ಲಬ್ ಸುಳ್ಯ ಮತ್ತು ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ತೋಟದಲ್ಲಿ 4.5 ಅಡಿ ಎತ್ತರದ 35 ಕೆಜಿ ತೂಕದ ಬೃಹತ್ ಕದಳಿ ಬಾಳೆಗೊನೆ ಬೆಳೆದಿದ್ದು, ಇದನ್ನು ಶ್ರೀದೇವರ ಪೂಜೆಗೆ ಸಮರ್ಪಿಸಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಆಗಸ್ಟ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
