ಸುಳ್ಯ ನ.ಪಂ. ಮುಂಭಾಗದ ಶೆಡ್‌ನಲ್ಲಿರುವ ಕಸ ತೆರವುಗೊಳಿಸಿ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ | ಆರೋಗ್ಯ ಸಚಿವ ಯು. ಟಿ. ಖಾದರ್ ರವರಿಗೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಡ್ಕ ಮನವಿ

ಸುಳ್ಯ ನಗರ ಪಂಚಾಯತ್ ಮುಂಭಾಗದ ಶೆಡ್‌ನಲ್ಲಿ ಹಲವು ವರ್ಷಗಳಿಂದ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸಿ, ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಡ್ಕ ಆರೋಗ್ಯ ಸಚಿವ ಯು.ಟಿ ಖಾದರ್ ರವರಿಗೆ ಇಂದು ಮನವಿ ಸಲ್ಲಿಸಿದ್ದಾರೆ.

. . . . . . . . .

ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಗೆ ಇಂದು ಸುಳ್ಯಕ್ಕೆ ಆಗಮಿಸಿದ ವೇಳೆ ಸುಪ್ರೀತ್ ರವರು ಸಚಿವರಿಗೆ  ಈ ಮನವಿ ಸಲ್ಲಿಸಿದ್ದಾರೆ.

. . . . . . .

ಸುಳ್ಯ ನಗರ ಪಂಚಾಯತ್ ಕಚೇರಿ ಮುಂಭಾಗದಲ್ಲಿರುವ ಶೆಡ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಕಸವನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದ ದುರ್ವಾಸನೆ ಉಂಟಾಗುವುದರ ಜೊತೆಗೆ ಸೊಳ್ಳೆ, ನೊಣ ಹಾಗೂ ಇತರೆ ಕೀಟಗಳ ಹೆಚ್ಚಳವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ, ಸಾರ್ವಜನಿಕರಿಗೆ ಹಾಗೂ ಕಚೇರಿಗೆ ಆಗಮಿಸುವ ನಾಗರಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಸದರಿ ಸ್ಥಳದಲ್ಲಿರುವ ಕಸವನ್ನು ತಕ್ಷಣವೇ ತೆರವುಗೊಳಿಸಿ, ಕಸ ವಿಲೇವಾರಿಗೆ ಸೂಕ್ತ ಹಾಗೂ ಶಾಶ್ವತ ವ್ಯವಸ್ಥೆಯನ್ನು ನಗರದ ಬೇರೆ ಸೂಕ್ತ ಸ್ಥಳದಲ್ಲಿ ಕಲ್ಪಿಸಿ, ಸಾರ್ವಜನಿಕರ ಆರೋಗ್ಯ ಮತ್ತು ಸ್ವಚ್ಛತೆಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಪತ್ರದಲ್ಲಿ ವಿನಂತಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading