ಕುಮಾರಸ್ವಾಮಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿವೇದ್ಯ ಗಣೇಶ್ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯಕ್ಕೆ ಆಯ್ಕೆ

ಸುಬ್ರಹ್ಮಣ್ಯ : ಕಡಬ ತಾಲೂಕಿನ ಕುಮಾರಸ್ವಾಮಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿವೇದ್ಯಾ ಗಣೇಶ್ ಅವರು CUET ಪರೀಕ್ಷೆಯಲ್ಲಿ ಅರ್ಹತೆ ಪಡೆದು, ನವದೆಹಲಿಯಲ್ಲಿರುವ South Asian University(SAU)ಯ ಐದು ವರ್ಷದ Integrated BS-MS(Interdisciplinary Sciences) ಕೋರ್ಸ್‌ಗೆ ಪ್ರವೇಶ ಪಡೆದಿದ್ದಾರೆ.

. . . . . . . . .

ಈ ಕೋರ್ಸ್‌ನಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಹಾಗೂ ಇತರೆ ವಿಜ್ಞಾನ ವಿಭಾಗಗಳ ಸಮಗ್ರ ಅಧ್ಯಯನದೊಂದಿಗೆ ಸಂಶೋಧನಾ ಮನೋಭಾವವನ್ನು ಬೆಳೆಸುವ ಅವಕಾಶ ದೊರೆಯುತ್ತದೆ. Interdisciplinary ಶಿಕ್ಷಣದ ಮೂಲಕ ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಕ್ಷೇತ್ರಗಳ ಜ್ಞಾನವನ್ನು ಸಮಗ್ರವಾಗಿ ಅಳವಡಿಸಿಕೊಂಡು ಉನ್ನತ ಶಿಕ್ಷಣ, ಸಂಶೋಧನೆ ಹಾಗೂ ಅಂತರರಾಷ್ಟ್ರೀಯ ಮಟ್ಟದ ವೃತ್ತಿ ಅವಕಾಶಗಳಿಗೆ ಸಿದ್ಧರಾಗುತ್ತಾರೆ.

. . . . . . .

ಈ ಸಾಧನೆಯ ಮೂಲಕ ನಿವೇದ್ಯಾ ಗಣೇಶ್ ಅವರು ಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಅವಕಾಶ ಪಡೆದಿದ್ದಾರೆ. ಇವರು ಅನುಗ್ರಹ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ಗಣೇಶ್ ಪ್ರಸಾದ್ ಹಾಗೂ ಶ್ರೀಮತಿ ರಜಿತಾ ದಂಪತಿಯ ಪುತ್ರಿ,

ಈ ಅಪೂರ್ವ ಸಾಧನೆಗೆ ಕುಮಾರಸ್ವಾಮಿ ಪಿಯು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ್ದು, ಅವರ ಉಜ್ವಲ ಶೈಕ್ಷಣಿಕ ಹಾಗೂ ವೃತ್ತಿಜೀವನಕ್ಕಾಗಿ ಶುಭ ಹಾರೈಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading