ಸುಳ್ಯ : ಯುವ ವಕೀಲರ ಬಳಗದಿಂದ “ಆಟಿಡೊಂಜಿ ದಿನ” ಆಚರಣೆ

ಸುಳ್ಯ, ಆ.09: ದಕ್ಷಿಣ ಕನ್ನಡ ಜಿಲ್ಲಾ ಯುವ ವಕೀಲರ ಬಳಗದ ವತಿಯಿಂದ “ಆಟಿಡೊಂಜಿ ದಿನ” ಹಾಗೂ ಸ್ನೇಹಮಿಲನ ಕಾರ್ಯಕ್ರಮವು ಆ.09ರಂದು ಸುಳ್ಯದ ರಸ ಪಾಕ ಗ್ರ್ಯಾಂಡ್ ಆಡಿಟೋರಿಯಂನಲ್ಲಿ ನಡೆಯಿತು.

. . . . . . . . .

ಯುವ ವಕೀಲರ ಬಳಗದ ಅಧ್ಯಕ್ಷರಾದ ಶ್ರೀಮತಿ ಲಿಖಿತಾ ಕೆ.ವಿ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ವಕೀಲರ ಸಂಘದ ಅಧ್ಯಕ್ಷರಾದ ಸುಕುಮಾರ ಕೊಡ್ತುಗೊಳಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಲಯನ್ಸ್ ಕ್ಲಬ್ ಸುಳ್ಯದ ಮಾಜಿ ಅಧ್ಯಕ್ಷರಾದ ಎಂ.ಬಿ ಸದಾಶಿವ ಭಾಗವಹಿಸಿದ್ದರು. ವಕೀಲರ ಸಂಘದ ಕಾರ್ಯದರ್ಶಿ ಜಗದೀಶ್ ಡಿ.ಪಿ ಹಾಗೂ ಯುವ ವಕೀಲರ ಬಳಗದ ಸಂಘಟನಾ ಕಾರ್ಯದರ್ಶಿ ಮಹೇಶ್ ಕೆ.ಆರ್ ಉಪಸ್ಥಿತರಿದ್ದರು.

. . . . . . .

ಕಾರ್ಯಕ್ರಮದಲ್ಲಿ ಯುವ ವಕೀಲರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಭಾಗವಹಿಸಿ, ಆಟಿ ಸಂಸ್ಕೃತಿ, ಸಂಪ್ರದಾಯ ಹಾಗೂ ಸೌಹಾರ್ದತೆಯನ್ನು ಪ್ರತಿಬಿಂಬಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಸ್ನೇಹಮಿಲನದ ಮೂಲಕ ವಕೀಲರ ನಡುವಿನ ಆತ್ಮೀಯತೆ ಹಾಗೂ ಬಾಂಧವ್ಯ ಮತ್ತಷ್ಟು ಗಟ್ಟಿಗೊಂಡಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಸಂಘದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು. ಯುವ ವಕೀಲರಾದ ಸಂದೀಪ್ ವಳಲಂಬೆ, ರವೀಶ್ ಕೆವಳ, ವಿಜಯ್ ಕಲ್ಮಡ್ಕ, ವಿನೀತ್ ಮುತ್ಲಾಜೆ, ನಿಹಾಲ್ ಮುತ್ಲಾಜೆ ಹಾಗೂ ಭಾನುಪ್ರಕಾಶ್ ಪೆರುಮುಂಡ ಸಹಕಾರ ನೀಡಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading