ಬಾಳಿಲ : ವಿದ್ಯಾ ಬೋಧಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಂತಿಕಲ್ಲು ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಂತಿಕಲ್ಲು ವಲಯ ಇದರ ವತಿಯಿಂದ ಬಾಳಿಲ ವಿದ್ಯಾ ಬೋಧಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು.

. . . . . . . . .

ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ನಿಂತಿಕಲ್ಲು ವಲಯದ ಕೋ ಅಪ್ ಸದಸ್ಯರಾದ ಕೂಸಪ್ಪ ಗೌಡ ಮುಗಪ್ಪು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಾಗೂ ಮಕ್ಕಳು ಉತ್ತಮ ಪ್ರಜೆಗಳಾಗಿ ದೇಶ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತಾವು ಯಾವ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಬಗ್ಗೆ ವಿವರಿಸಿದರು.
ಶಾಲಾ ಮುಖ್ಯ ಗುರುಗಳಾದ ಉದಯಕುಮಾರ್ ರೈ ಯವರು ಸಭಾ ಅಧ್ಯಕ್ಷತೆಯನ್ನು ವಹಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉತ್ತಮ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು.

. . . . . . .

ವಲಯ ಮೇಲ್ವಿಚಾರಕಿ ಶ್ರೀಮತಿ ಸವಿತಾ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕರಾದ ಲೋಕೇಶ್ ಧನ್ಯವಾದ ಸಮರ್ಪಿಸಿದರು..
ಕಲ್ಮಡ್ಕ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಶ್ರೀಮತಿ ರತ್ನಾವತಿ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading